ರಾಜಕೀಯ

ಬೇರೆ ಪಕ್ಷದ 20 ಶಾಸಕರು ಬಿಜೆಪಿ ಸೇರಲು ಸಿದ್ದರಿದ್ದಾರೆ: ಆಪರೇಷನ್ ಕಮಲದ ದಾಳ ಉರುಳಿಸಿದ ಸವದಿ

Shilpa D

ಹಾವೇರಿ: ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಿಂದ 15ರಿಂದ 20 ಮಂದಿ ಶಾಸಕರು ಬಿಜೆಪಿಗೆ ಸೇರಲು ತಯಾರಿದ್ದಾರೆ. ಅವರನ್ನು ಸೇರಿಸಿಕೊಳ್ಳಬೇಕೋ ಬೇಡವೋ ಎಂಬ ಚಿಂತನೆ ಪಕ್ಷದಲ್ಲಿ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.

ಹಾವೇರಿಯಲ್ಲಿ ಮಾತನಾಡಿದ ಡಿಸಿಎಂ ಲಕ್ಷ್ಮಣ ಸವದಿ ಅನೇಕ ಶಾಸಕರು ಸಂಪರ್ಕದಲ್ಲಿದ್ದಾರೆ. ಅವರನ್ನು ತೆಗೆದುಕೊಳ್ಳಬೇಕೋ ಬೇಡವೋ ಎಂಬ ಚಿಂತನೆ ನಮ್ಮ ಪಕ್ಷದಲ್ಲಿದೆ ಎಂದಿದ್ದಾರೆ. ಬೇರೆ ಬೇರೆ ಪಕ್ಷದಿಂದ 15-20 ಶಾಸಕರು ನಮ್ಮ ಪಕ್ಷಕ್ಕೆ ಬರಲು ಸಿದ್ಧರಿದ್ದಾರೆ. ಈ ಬಗ್ಗೆ ಪಕ್ಷ, ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ. ಬಿಜೆಪಿ ಪಕ್ಷದ ವರ್ಚಸ್ಸು ಇರೋದರಿಂದಲೇ ಅವರೆಲ್ಲ ಬರಲು ಮುಂದಾಗಿದ್ದಾರೆ ಎಂದಿದ್ದಾರೆ.

ನಮ್ಮ ಪಕ್ಷದ ಶಾಸಕರು ಮಾರಾಟಕ್ಕೆ ಇಲ್ಲ. ನಮ್ಮವರು ಪಕ್ಷ ನಿಷ್ಠೆಯನ್ನು ಹೊಂದಿದ್ದಾರೆ. ಶಾಸಕರ ರಹಸ್ಯ ಸಭೆ ಬಗ್ಗೆ ಈಗಾಗಲೇ ಉಮೇಶ ಕತ್ತಿ ಸ್ಪಷ್ಟನೆ ನೀಡಿದ್ದಾರೆ. ಉತ್ತರ ಕರ್ನಾಟಕದ ಅನೇಕ ಶಾಸಕರು ಊಟಕ್ಕಾಗಿ ಒಂದೆಡೆ ಸೇರಿದ್ದಾರೆ. ಪಕ್ಷದಲ್ಲಿ ಯಾವುದೇ ಭಿನ್ನಮತವಿಲ್ಲ. ಎಲ್ಲ ಶಾಸಕರು ಯಡಿಯೂರಪ್ಪ ನಾಯಕತ್ವದಲ್ಲಿ ಒಟ್ಟಾಗಿದ್ದಾರೆ’ ಎಂದು ಸ್ಪಷ್ಟಪಡಿಸಿದರು.
 

SCROLL FOR NEXT