ಯಡಿಯೂರಪ್ಪ ಮತ್ತು ಅಮಿತ್ ಶಾ (ಸಂಗ್ರಹ ಚಿತ್ರ) 
ರಾಜಕೀಯ

ಬಂಡಾಯದ ವಿಚಾರ ನಮಗೆ ಬಿಡಿ, ಕೊರೋನಾ ಬಗ್ಗೆ ಗಮನ ಕೊಡಿ: ಸಿಎಂ ಯಡಿಯೂರಪ್ಪಗೆ 'ಶಾ' ಭರವಸೆ

ಭೋಜನ ಕೂಟದ ನೆಪದಲ್ಲಿ ವಿವಿಧ ಬೇಡಿಕೆಗಳನ್ನು ಇಟ್ಟುಗೊಂಡು ಬೆಳಗಾವಿಯ ಹಿರಿಯ ಶಾಸಕ ಉಮೇಶ್ ಕತ್ತಿ ನೇತೃತ್ವದಲ್ಲಿ ಆಡಳಿತಾರೂಢ ಬಿಜೆಪಿಯ ವಿವಿಧ ಶಾಸಕರು ನಡೆಸಿದ ಸಭೆ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಮಾತುಕತೆ ನಡೆಸಿದ್ದು, ಈ ಕುರಿತು ಹೆಚ್ಚು ತಲೆಕೆಡಿಸಿಕೊಳ್ಳದೆ, ಕೊರೋನಾ ವೈರಸ್ ಕುರಿತು ಗಮನಹರಿಸಿ...

ಬೆಂಗಳೂರು: ಭೋಜನ ಕೂಟದ ನೆಪದಲ್ಲಿ ವಿವಿಧ ಬೇಡಿಕೆಗಳನ್ನು ಇಟ್ಟುಗೊಂಡು ಬೆಳಗಾವಿಯ ಹಿರಿಯ ಶಾಸಕ ಉಮೇಶ್ ಕತ್ತಿ ನೇತೃತ್ವದಲ್ಲಿ ಆಡಳಿತಾರೂಢ ಬಿಜೆಪಿಯ ವಿವಿಧ ಶಾಸಕರು ನಡೆಸಿದ ಸಭೆ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಮಾತುಕತೆ ನಡೆಸಿದ್ದು, ಈ ಕುರಿತು ಹೆಚ್ಚು ತಲೆಕೆಡಿಸಿಕೊಳ್ಳದೆ, ಕೊರೋನಾ ವೈರಸ್ ಕುರಿತು ಗಮನಹರಿಸುವಂತೆ ಸೂಚನೆ ನೀಡಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. 

ಕಳೆದ ರಾತ್ರಿ ಯಡಿಯೂರಪ್ಪ ಅವರಿಗೆ ದೂರವಾಣಿ ಕರೆ ಮಾಡಿರುವ ಅಮಿತ್ ಶಾ ಅವರು, ಪಕ್ಷದ ವಿಚಾರವನ್ನು ನಮಗೆ ಬಿಡಿ. ಪ್ರಸ್ತುತ ರಾಜ್ಯದಲ್ಲಿ ಕೊರೋನಾ ವೈರಸ್ ನಿಗ್ರಹಿಸುವತ್ತ ಗಮನ ಹರಿಸುವಂತೆ ತಿಳಿಸಿದ್ದಾರೆಂದು ಹೇಳಲಾಗುತ್ತಿದೆ. 

ಪಕ್ಷದ ವಿಚಾರ ನಮಗೆ ಬಿಡಿ. ಇದೀ ದೇಶ ಕೊರೋನಾ ಸಂಕಷ್ಟವನ್ನು ಎದುರಿಸುತ್ತಿದೆ. ಕರ್ನಾಟಕ ಬಿಜೆಪಿ ಪಕ್ಷದಲ್ಲಿ ಉಂಟಾಗಿರುವ ಭಿನ್ನಮತವನ್ನು ನಾವು ನೋಡಿಕೊಳ್ಳುತ್ತೇವೆ. ಈ ವಿಚಾರದ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳಬೇಡಿ ಎಂದು ಅಭಯಹಸ್ತ ನೀಡಿದ್ದಾರೆಂದು ತಿಳಿದುಬಂದಿದೆ. 

ಇದರೊಂದಿಗೆ ಕೊರೋನಾ ಸಂಕಷ್ಟದಿಂದ ಉದ್ಭವಿಸಿರುವ ಪರಿಸ್ಥಿತಿ ನಿಭಾಯಿಸುವಲ್ಲಿ ನಿರತರಾಗಿರುವ ಯಡಿಯೂರಪ್ಪ ಮತ್ತು ಬಿಜೆಪಿ ರಾಷ್ಟ್ರೀಯ ನಾಯಕರು ಸದಸ್ಯಕ್ಕೆ ರಾಜ್ಯದ ಶಾಸಕರ ಬೇಡಿಕೆಗಳ ಬೆದರಿಕೆಗೆ ಸೊಪ್ಪುವ ಹಾಕುವ ಸಾಧ್ಯತೆಗಳಿಲ್ಲ ಎಂಬುದನ್ನು ತೋರಿಸುತ್ತಿದೆ. 

ಈ ನಡುವೆ, ಈ ಎಲ್ಲಾ ಬೆಳವಣಿಗೆಗಳು ರಾಜ್ಯಸಭಾ ಚುನಾವಣೆ ಹಾಗೂ ವಿಧಾನಸಭೆಯಿಂದ ವಿಧಾನಪರಿಷತ್'ಗೆ ನಡೆಯುವ ಚುನಾವಣೆಗೆ ಅಭ್ಯರ್ಥಿಗಳನ್ನು ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂಬ ಸ್ಪಷ್ಟ ಸಂದೇಶವನ್ನು ನೀಡತೊಡಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: 44 ವರ್ಷಗಳ ಬರ ನೀಗಿಸಿದ ಮಹಿಳಾ ಪಡೆ; ಚೀನಾ ಮಣಿಸಿ ಚಿನ್ನ ಗೆದ್ದ ಭಾರತ!

ಬೆಂಗಳೂರಿನಲ್ಲಿ ಮನೆ ಖರೀದಿದಾರರಿಗೆ 927 ಕೋಟಿ ವಂಚನೆ ಆರೋಪ: ಓಜೋನ್ ಅರ್ಬಾನಾ CMD ವಾಸುದೇವನ್ ಬಂಧನ!

Asian Games 2026: 1 ನಿಮಿಷದಲ್ಲಿ 2 ಚಿನ್ನದ ಪದಕ ಗೆದ್ದ ಭಾರತ, 75 ಪದಕಗಳೊಂದಿಗೆ 5ನೇ ಸ್ಥಾನಕ್ಕೆ ಲಗ್ಗೆ!

'ಒಂದೇ ಒಂದು ಪೋಸ್ಟ್ ಕೂಡ ಮಾಡಿಲ್ಲ: ಸ್ಮಿತ್ ಮಚ್ಚರ್ ವಿಚಾರದಲ್ಲಿ ರಾಹುಲ್ ಗಾಂಧಿಯ ಮೌನವನ್ನು ಪ್ರಶ್ನಿಸಿದ ಕಿಶನ್ ರೆಡ್ಡಿ!

ಜೆಡಿಎಸ್ ಪ್ರಧಾನ ಕಾರ್ಯದರ್ಶಿಯಾಗಿ Biggboss ಮಾಜಿ ಸ್ಪರ್ಧಿ ಜಾಹ್ನವಿ ನೇಮಕ!