ಡಿಕೆ ಶಿವಕುಮಾರ್ 
ರಾಜಕೀಯ

ಆರ್ ಆರ್ ನಗರ ಉಪಚುನಾವಣೆ: ಪ್ರಚಾರದ ವೇಳೆ ಡಿಕೆ ಶಿವಕುಮಾರ್‌ರಿಂದ 'ಜೈ ಶ್ರೀರಾಮ್' ಘೋಷಣೆ!

ಆರ್ ಆರ್ ನಗರ ಉಪಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಅವರು ಹಿಂದುತ್ವ ಜಪ ಮಾಡಿದ್ದಾರೆ.

ಬೆಂಗಳೂರು: ಆರ್ ಆರ್ ನಗರ ಉಪಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಅವರು ಹಿಂದುತ್ವ ಜಪ ಮಾಡಿದ್ದಾರೆ.

ಹಿಂದೂ ಜಾಗೃತ ಸೇನೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ ಅವರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರು. 

ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರ ಚುನಾವಣಾ ಪ್ರಚಾರ ರ್ಯಾಲಿಗಳನ್ನು ನಡೆಸುತ್ತಿರುವ ಡಿಕೆ ಶಿವಕುಮಾರ್ ಅವರು ಕಳೆದ ರಾತ್ರಿ ಸಂಘಟನೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ್ದರು. ಈ ವೇಳೆ ಕುಸುಮಾರನ್ನು ಮತ ನೀಡಿ ಗೆಲ್ಲಿಸಿ ಎಂದು ಮತದಾರರಲ್ಲಿ ಮನವಿ ಮಾಡಿದರು. 

ನಂತರ ಮೈಕ್ ಹಿಡಿದು ಜೈ ಶ್ರೀರಾಮ್, ಜೈ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರು. ಇದಕ್ಕೆ ಪ್ರತಿಯಾಗಿ ಅಭಿಮಾನಿಗಳು ಸಹ ಧ್ವನಿ ಕೂಗಿಸಿದರು.

ಆರ್ ಆರ್ ನಗರ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಮುನಿರತ್ನ, ಕಾಂಗ್ರೆಸ್ ನಿಂದ ಕುಸುಮಾ ಮತ್ತು ಜೆಡಿಎಸ್ ನಿಂದ ಕೃಷ್ಣಮೂರ್ತಿ ರಣ ಕಣದಲ್ಲಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT