ರಾಜಕೀಯ

ರಾಜರಾಜೇಶ್ವರಿ ನಗರ, ಶಿರಾ ಉಪಚುನಾವಣೆ: ಬಹಿರಂಗ ಪ್ರಚಾರಕ್ಕಿಂದು ತೆರೆ

Manjula VN

ಬೆಂಗಳೂರು: ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್, ಜೆಡಿಎಸ್'ಗೆ ಪ್ರತಿಷ್ಠೆಯ ಕಣವಾಗಿರುವ ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರದ ಚುನಾವಣಾ ಬಹಿರಂಗ ಪ್ರಚಾರವು ಭಾನುವಾರ ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ. ಕ್ಷೇತ್ರಕ್ಕೆ ಸಂಬಂಧಪಡದವರು ಹೊರ ನಡೆಯಬೇಕು ಎಂದು ಚುನಾವಣಾ ಆಯೋಗವು ನಿರ್ದೇಶನ ನೀಡಿದೆ. 

ಬಹಿರಂಗ ಪ್ರಚಾರದ ಅವಧಿ ಮುಕ್ತಾಯವಾದ ಬಳಿಕ ಯಾವುದೇ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು, ಕಾರ್ಯಕರ್ತರು ಸೇರಿದಂತೆ ಯಾರೊಬ್ಬರೂ ಬಹಿರಂಗ ಪ್ರಚಾರ ಕೈಗೊಳ್ಳುತ್ತಿಲ್ಲ. ಸೋಮವಾರ ಅಭ್ಯರ್ಥಿಗಳು ಅಂತಿಮ ಕಸರತ್ತು ನಡೆಸಲಿದ್ದು, ಮನೆ ಮನೆಗೆ ತೆರಳಿ ಮತಯಾಚಿಸಲಿದ್ದಾರೆ. 

ಭಾನುವಾರ ಸಂಜೆ 6 ಗಂಟೆಯ ಬಳಿಕ ಕ್ಷೇತ್ರಕ್ಕೆ ಸಂಬಂಧಪಡದ ವ್ಯಕ್ತಿಗಳು, ರಾಜಕೀಯ ಕಾರ್ಯಕರ್ತರು ಕ್ಷೇತ್ರದಲ್ಲಿ ಉಳಿಯುವಂತಿಲ್ಲ. ಮತದಾರರಲ್ಲದವರು ಕ್ಷೇತ್ರವನ್ನು ಬಿಟ್ಟು ಹೋಗಬೇಕು ಎಂದು ಸೂಚನೆ ನೀಡಿದೆ. 

ಇಂದು ಬಹಿರಂಗ ಪ್ರಚಾರಕ್ಕೆ ತೆರಬೀಳುತ್ತಿದ್ದು, ಆರ್.ಆರ್. ನಗರದಲ್ಲಿ ಅಂತಿಮ ಹಂತದ ಕಸರತ್ತು ನಡೆಸಲು ಕಾಂಗ್ರೆಸ್ ತುದಿಗಾಲಲ್ಲಿ ನಿಂತಿದೆ. ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮತಬೇಟೆಯಾಡಲಿದ್ದಾರೆ. ಕೊನೆ ಕ್ಷಣದಲ್ಲಿ ಮತದಾರರನ್ನ ಸೆಳೆಯಲು ಮುಂದಾಗಿದ್ದಾರೆ.

ಇದರಂತೆ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೂ ಇಂದು ಸಂಜೆ ತೆರೆಬೀಳಲಿದೆ.. ಹೀಗಾಗಿ, ಮೂರು ಪಕ್ಷದ ನಾಯಕರೆಲ್ಲ ಅಂತಿಮ ಹಂತದ ನಗಾರಿ ಬಾರಿಸಲು ಸಜ್ಜಾಗಿದ್ದಾರೆ. 

ಪಾದರಸದಂತೆ ಶಿರಾ ಕ್ಷೇತ್ರದಲ್ಲಿ ಸುತ್ತಾಡ್ತಾ, ಸದ್ದಿಲ್ಲದೆ ಕಾರ್ಯತಂತ್ರ ನಡೆಸುತ್ತಿದ್ದಾರೆ. ಆದರೆ, ನಾಯಕರ ಈ ಲೆಕ್ಕಾಚಾರಗಳಿಗೆಲ್ಲ, ನವೆಂಬರ್ 3ರಂದು ಮತದಾರ ಅಭ್ಯರ್ಥಿಗಳ ಹಣೆಬರಹ ಬರೆಯಲಿದ್ದಾನೆ

SCROLL FOR NEXT