ಡಿಕೆ ರವಿ ತಾಯಿ, ತಂದೆ 
ರಾಜಕೀಯ

ಸೊಸೆಯನ್ನು ಬೆಂಬಲಿಸುವಂತೆ ಡಿ. ಕೆ. ರವಿ ತಾಯಿ ಮನವಿ

ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿರುವ ಐಎಎಸ್ ಅಧಿಕಾರಿ ಡಿ.ಕೆ. ರವಿ ಪತ್ನಿ ಕುಸುಮಾ ಪರ ರವಿ ತಾಯಿ ಗೌರಮ್ಮ ಮತಯಾಚಿಸಿದ್ದಾರೆ.

ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿರುವ ಐಎಎಸ್ ಅಧಿಕಾರಿ ಡಿ.ಕೆ. ರವಿ ಪತ್ನಿ ಕುಸುಮಾ ಪರ ರವಿ ತಾಯಿ ಗೌರಮ್ಮ ಮತಯಾಚಿಸಿದ್ದಾರೆ.

ಕುಸುಮಾ ಕಾಂಗ್ರೆಸ್‌ನಿಂದ ಅಭ್ಯರ್ಥಿ ಎಂದು ತಿಳಿದ ತಕ್ಷಣ ಕುಸುಮಾ ಸ್ಪರ್ಧೆಗೆ ವಿರೋಧ  ವ್ಯಕ್ತಪಡಿಸಿದ್ದ ರವಿ ತಾಯಿ, ಸೊಸೆ ತಮ್ಮನ್ನು ಭೇಟಿ ಮಾಡದೇ ನಿರ್ಲಕ್ಷ್ಯ ಮಾಡಿದ್ದು, ಅವಳಿಗೆ ತಮ್ಮ ಮಗನ ಹೆಸರು ಹೇಳಲು ಅರ್ಹತೆಯಿಲ್ಲ. ಈ ಚುನಾವಣೆಯಲ್ಲಿ ತಮ್ಮ ಮಗನ ಹೆಸರು ಬಳಕೆ ಮಾಡಿದರೆ ತಾವು ಸುಮ್ಮನಿರುವುದಿಲ್ಲ ಎಂದು ಹೇಳಿದ್ದರು. 

ಬಿಜೆಪಿ ಅದನ್ನೇ ಅಸ್ತ್ರವಾಗಿ ಬಳಸಿ ಕುಸುಮಾ ಯಾವುದೇ ಕಾರಣಕ್ಕೂ ಡಿ.ಕೆ. ರವಿ ಹೆಸರು ಬಳಸಿಕೊಳ್ಳಬಾರದು ಎಂದು ಆಗ್ರಹಿಸಿತ್ತು. ಇದೀಗ ಬದಲಾದ ಸನ್ನಿವೇಶದಲ್ಲಿ ಸೊಸೆ ಪರ ಡಿ.ಕೆ.ರವಿ ತಾಯಿ ಮತಯಾಚಿಸಿ ಅಚ್ಚರಿಪಡಿಸಿದ್ದಾರೆ.

ಸಂಸದೆ ಶೋಭಾ ಕರಂದ್ಲಾಜೆ ಈ ಕುರಿತು ಟ್ವೀಟ್ ಮಾಡಿದ್ದಕ್ಕೆ ಕಾಂಗ್ರೆಸ್ ಮಹಿಳಾ ಘಟಕ  ಶೋಭಾ ಕರಂದ್ಲಾಜೆ ವಿರುದ್ಧ ತಿರುಗಿ ಬಿದ್ದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್