ರಾಜಕೀಯ

ಆಯೋಗ ಅನುಮತಿ ನೀಡಿದರೆ ಆರೋಪಗಳಿಗೆ ಉತ್ತರಿಸುತ್ತೇನೆ, ಎಲ್ಲಿ ಬೇಕಾದರೂ ಬರಲು ಸಿದ್ದ: ಮುನಿರತ್ನ

Manjula VN

ಬೆಂಗಳೂರು: ನನ್ನ ವಿರುದ್ಧದ ಎಲ್ಲ ಆರೋಪಗಳಿಗೂ ಚುನಾವಣಾ ಆಯೋಗ ಅನುಮತಿ ನೀಡುತ್ತಿದ್ದಂತೆ ಸ್ಪಷ್ಟೀಕರಣ ನೀಡುತ್ತೇನೆ. ತಿರುಪತಿಯಲ್ಲ ದೇವಲೋಕದ ಯಾವ ದೇವಾಲ ಯಕ್ಕೆ ಬೇಕಾದರೂ ಬರಲು ಸಿದ್ದನಿದ್ದೇನೆ ಎಂದು ಬಿಜೆಪಿ ಅಭ್ಯರ್ಥಿ ಮುನಿರತ್ನ ಕಾಂಗ್ರೆಸ್ ನಾಯಕರಿಗೆ ಪ್ರತಿಸವಾಲು ಹಾಕಿದ್ದಾರೆ.

ಮಲ್ಲೇಶ್ವರಂನ ವೈಯಾಲಿಕಾವಲ್ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಪ್ರತಿಪಕ್ಷಗಳು ಮಾಡಿದ ಆರೋಪ ಕುರಿತು ನನ್ನ ಉತ್ತರಗಳಿಗೆ ಪ್ರಶ್ನೆಗಳನ್ನು ಪಟ್ಟಿ ಮಾಡಿಕೊಳ್ಳಿ. ಎಲ್ಲಾ ಪ್ರಶ್ನೆಗಳಿಗೂ ಉತ್ತರ ಕೊಡಲು ನಾನು ಸಿದ್ದವಾಗಿದ್ದೇನೆ. ಇಂದು ನೀತಿ ಸಂಹಿತೆ ಹಿನ್ನೆಲೆಯಲ್ಲಿ ಮಾತನಾಡುವುದಿಲ್ಲ. ತಿರುಪತಿಗೆ ಅಲ್ಲ ಯಾರು ಯಾರು ಯಾವ ದೇವರನ್ನು ನಂಬುತ್ತಾರೆ ಎಲ್ಲ ದೇವಾಲಯಗಳಿಗೂ ನಾನು ಬರುಲ ಸಿದ್ದನಿದ್ದೇನೆ ಎಂದು ಪಂಥಾಹ್ವಾನ ಸ್ವೀಕರಿಸಿದರು.

ಇದೇ ವೇಳೆ ಮತದಾನ ಕುರಿತಂತೆ ಮಾತನಾಡಿದ ಅವರು, ಕೊರೋನಾದಂತಹ ಸಂದರ್ಭದಲ್ಲಿ ಮತದಾನ ಮಾಡುತ್ತಿರುವುದು ವಿಶೇಷವಾಗಿದೆ. 18 ವರ್ಷದ ಯುವಕ, ಯುವತಿ ತನ್ನ ಮೊದಲ ಮತದಾನದಲ್ಲಿ ಭಾಗಿಯಾಗುತ್ತಿದ್ದರೆ, ಇವತ್ತಿನ ಮತದಾನ ಇತಿಹಾಸದಲ್ಲಿ ಉಳಿಯುತ್ತದೆ. ಏಕೆಂದರೆ, ಕೊರೋನಾ ಕಾರಣದಿಂದ ಚುನಾವಮಾ ಆಯೋಗ ಹೆಚ್ಚಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಕೊರೋನಾಗೆ ಹೆದರುವ ಅಗತ್ಯವಿಲ್ಲ. ಶಾಂತಿಯುತವಾಗಿ ಮತದಾನ ನಡೆಯುತ್ತಿದೆ. ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ. 

ಕ್ಷೇತ್ರದ ಮತದಾರರು ಬುದ್ಧಿವಂತರಾಗಿದ್ದು, ಎಲ್ಲರೂ ಮತ ಚಲಾಯಿಸುತ್ತಾರೆಂಬ ವಿಶ್ವಾಸವಿದೆ. ಯಾರಿಗಾದರೂ ಮತ ಹಾಕಿ ಆದರೆ, ಎಲ್ಲರೂ ಮತದಾನ ಮಾಡಿ. ನಾನು ಮಲ್ಲೇಶ್ವರಂ ನಿವಾಸಿಯಾಗಿದ್ದು, ನನಗೆ ಆರ್.ಆರ್.ನಗರದಲ್ಲಿ ಮತದಾನದ ಅವಕಾಶವಿಲ್ಲ. ಆದ್ದರಿಂದ ಮನೆಯಲ್ಲಿರುತ್ತೇನೆ. ನಾನು ಎಲ್ಲದಕ್ಕೂ ಸಿದ್ಧವಾಗಿದ್ದು, ಜನರ ತೀರ್ಪು ಅಂತಿಮವಾಗಿದೆ. ಚುನಾವಣಾ ಸಂದರ್ಭದಲ್ಲಿ ನನ್ನ ಮೇಲೆ ಮಾಡಿರುವ ಆರೋಪಗಳಿಗೂ ಫಲಿತಾಂಶದ ದಿನದಂದು ಉತ್ತರ ನೀಡುತ್ತೇನೆ ಎಂದು ತಿಳಿಸಿದ್ದಾರೆ. 

SCROLL FOR NEXT