ರಾಜಕೀಯ

ಫಲಿತಾಂಶಕ್ಕೆ ಮುನ್ನವೇ ಟಿ.ಬಿ.ಜಯಚಂದ್ರ ಸೋಲೊಪ್ಪಿಕೊಂಡಿದ್ದಾರೆ: ಎಸ್ ಟಿ ಸೋಮಶೇಖರ್

Shilpa D

ಬೆಂಗಳೂರು: ಮತಯಂತ್ರದ ಕುರಿತಾಗಿ ಅನುಮಾನ ವ್ಯಕ್ತಪಡಿಸುವ ಮೂಲಕ ಶಿರಾ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ ಜಯಚಂದ್ರ ಫಲಿತಾಂಶಕ್ಕೆ ಮುನ್ನವೇ ಸೋಲೊಪ್ಪಿಕೊಂಡಿದ್ದಾರೆ ಎಂದು ಸಚಿವ ಎಸ್‌ಟಿ ಸೋಮಶೇಖರ್‌ ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳ ಎರಡೂ ಕಡೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಭೇರಿ ಭಾರಿಸಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದರು.

ಈಗಾಗಲೇ ಮತಪೆಟ್ಟಿಗೆ ಬಗ್ಗೆ ಅಪಸ್ವರ ಎತ್ತುವ ಮೂಲಕ ಶಿರಾ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಅವರು ಫಲಿತಾಂಶಕ್ಕೆ ಮುನ್ನವೇ ಸೋಲೊಪ್ಪಿಕೊಂಡಿದ್ದಾರೆ ಎಂದು ಲೇವಡಿ ಮಾಡಿದರು. ರಾಜರಾಜೇಶ್ವರಿ ನಗರದಲ್ಲಿ ಶೇಕಡಾವಾರು ಮತದಾನ ಕಡಿಮೆಯಾದರೂ ಬಿಜೆಪಿ ಗೆಲುವು ನಿಶ್ಚಿತ. ಮುನಿರತ್ನ ಅವರ ಕಾರ್ಯಗಳು ಗೆಲುವು ತಂದುಕೊಡಲಿದೆ ಎಂದು ಸಚಿವರು ತಿಳಿಸಿದರು.

ದಸರಾದಂತೆ ಪಂಚಲಿಂಗ ದರ್ಶನ ಮಹೋತ್ಸವವನ್ನು ಸರಳವಾಗಿ ಮಾಡಬೇಕು ಎಂಬುದು ಸರ್ಕಾರದ ಉದ್ದೇಶ. ಹಾಗಾಗಿ ಸಭೆಯಲ್ಲಿ ಅಧಿಕಾರಿಗಳ ಮಾಹಿತಿ ಪಡೆದು ನಿರ್ಧರಿಸಲಾಗುತ್ತದೆ ಎಂದರು. ಹೈಕೋರ್ಟ್ ಆದೇಶದಂತೆ ಸಹಕಾರ ಸಂಸ್ಥೆಗಳ ಚುನಾವಣೆಗಳು ನಡೆಯಲಿವೆ. ಡಿಸೆಂಬರ್ ನಲ್ಲಿ ಜನರಲ್ ಬಾಡಿ ಸಭೆಯನ್ನು ನಿಗದಿಪಡಿಸಲಾಗಿದೆ ಎಂದು ಸಚಿವರು ತಿಳಿಸಿದರು.

SCROLL FOR NEXT