ಟಿ.ಬಿ ಜಯಚಂದ್ರ 
ರಾಜಕೀಯ

ಅಭಿವೃದ್ಧಿಗಾಗಿ ಜನರ ಮತ- ರಾಜೇಶ್ ಗೌಡ; ವಿದ್ಯುನ್ಮಾನ ಮತಯಂತ್ರಗಳ ಬಗ್ಗೆ ಜಯಚಂದ್ರ ಸಂಶಯ

ಶಿರಾದಲ್ಲಿ ಮತದಾನ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಇದು ನನಗೆ 10ನೇ ಚುನಾವಣೆ. ಆದರೆ ಹಿಂದೆಂದೂ ಕಾಣದ ಭ್ರಷ್ಟಾಚಾರ ಈ ಚುನಾವಣೆಯಲ್ಲಿ ನಡೆದಿದೆ ಎಂದು ಆರೋಪಿಸಿದರು. 

ತುಮಕೂರು: ಶಿರಾ ಉಪಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳ ಕಾರ್ಯವೈಖರಿಯ ಬಗ್ಗೆ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಸಂಶಯ ವ್ಯಕ್ತಪಡಿಸಿದ್ದಾರೆ. 

ಶಿರಾದಲ್ಲಿ ಮತದಾನ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಇದು ನನಗೆ 10ನೇ ಚುನಾವಣೆ. ಆದರೆ ಹಿಂದೆಂದೂ ಕಾಣದ ಭ್ರಷ್ಟಾಚಾರ ಈ ಚುನಾವಣೆಯಲ್ಲಿ ನಡೆದಿದೆ ಎಂದು ಆರೋಪಿಸಿದರು. 

ಇಲ್ಲಿ ಅಧಿಕಾರ ದುರುಪಯೋಗ ಆಗಿದೆ. ನನಗೆ ಇವಿಎಂ ಮೇಲೆ ಸಂಶಯ ಬರುತ್ತಿದೆ. ನಮ್ಮ ಕಾರ್ಯಕರ್ತರು ಸಹ ಈ ಬಗ್ಗೆ ಮಾತನಾಡುತ್ತಿದ್ದಾರೆ. ನಾನು ಗೆದ್ದ ಬಳಿಕ ಇವಿಎಂ ಬಗ್ಗೆ ಮತ್ತಷ್ಟು ಮಾತನಾಡುತ್ತೇನೆ ಎಂದು ಹೇಳಿದರು.

ಶಿರಾ ಕ್ಷೇತ್ರದಲ್ಲಿ ಅಧಿಕಾರಿಗಳು ಬಿಜೆಪಿ ಏಜೆಂಟರಂತೆ ಕೆಲಸ ಮಾಡಿದ್ದು, ಮತಯಂತ್ರಗಳಲ್ಲಿ ಏನೆಲ್ಲ ಪವಾಡ ನಡೆಸಿದ್ದಾರೊ ಗೊತ್ತಿಲ್ಲ. ಈ ಬಗ್ಗೆ ಈಗಾಗಲೇ ನಾನು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇನೆ. ಆದರೂ ಅವರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.

ಸೋಮವಾರ ನೂರಕ್ಕೂ ಹೆಚ್ಚು ಮಂದಿ ಹಾಸನ ಮೂಲದವರು ಮತದಾರರಿಗೆ ಹಣ ಹಂಚುವಾಗ ಸಿಕ್ಕಿ ಬಿದ್ದಿದ್ದಾರೆ. ಜನರು ಅವರನ್ನು ಕೂಡಿ ಹಾಕಿದ್ದರು. ಆದರೆ ಮಾನವೀಯ ದೃಷ್ಟಿಯಿಂದ ಬಿಟ್ಟು ಕಳುಹಿಸಿದ್ದಾರೆ  ಎಂದು ತಿಳಿಸಿದರು.

ಇನ್ನೂ ಜಯಚಂದ್ರ ಅವರ ಪ್ರಚಾರದಲ್ಲಿ ಪಾಲ್ಗೋಂಡಿದ್ದ ಅವರ ಪತ್ನಿ ನಿರ್ಮಲಾ  ತಮ್ಮ ಪತಿ ಗೆಲ್ಲುವ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. ಕಳೆದ 40 ವರ್ಷಗಳಲ್ಲಿ ನನ್ನ ಪತಿ ಹಲವು ಅಭಿವೃದ್ಧಿ ಕೆಲಸ ಮಾಡಿದ್ದಾರೆ, ಹೀಗಾಗಿ ಅವರು ಗೆಲ್ಲುತ್ತಾರೆ ಎಂದು ಅವರು ತಿಳಿಸಿದ್ದಾರೆ.

ಇನ್ನೂ ಈ ಆರೋಪವನ್ನು ನಿರಾಕರಿಸಿರುವ ಬಿಜೆಪಿ ಅಭ್ಯರ್ಥಿ ಸಿ.ಎಂ ರಾಜೇಶ್ ಗೌಡ ಇದು ಆಧಾರರಹಿತ ಆರೋಪವಾಗಿದೆ, ಶಿರಾ ಕ್ಷೇತ್ರದ ಮತದಾರರು ಅಭಿವೃದ್ಧಿಗಾಗಿ ಮತ ಹಾಕಿದ್ದಾರೆ, ಬಿಜೆಪಿ ಸರ್ಕಾರ ಇದಕ್ಕೆ ಬದ್ಧವಾಗಿದೆ ಎಂದು ಹೇಳಿದ್ದಾರೆ.

ನನ್ನ ಪತಿ ಉತ್ತಮ ಕೆಲಸ ಮಾಡಿದ್ದಾರೆ, ನನ್ನ ಪರ ಅನುಕಂಪದ ಅಲೆಯಿದೆ, ಹೀಗಾಗಿ ತಾವು ಗೆಲ್ಲುವುದಾಗಿ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. 

ನನ್ನ ಪರವಾಗಿ ಮಾಜಿ ಪ್ರದಾನಿ ದೇವೇಗೌಡ ಮತ್ತು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ತೀವ್ರ ಪ್ರಚಾರ ನಡೆಸಿದ್ದಾರೆ. ಹೀಗಾಗಿ ನಾನು ಗೆಲ್ಲುತ್ತೇನೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಂಪುಟ ಸಲಹೆ ಮೇರೆಗೆ KPSC ಅಧ್ಯಕ್ಷ ಸಾಹುಕಾರ್ ರನ್ನು ಮತ್ತೆ ಅಮಾನತು ಮಾಡಿದ ರಾಜ್ಯಪಾಲರು!

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

Chhattisgarh: ಹೊಲದಿಂದ ಮನೆಗೆ ಮರಳುತ್ತಿದ್ದ ಮಹಿಳೆಗೆ ಸಿಡಿಲು ಬಡಿದು ಸಾವು, Video

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!