ರಾಜಕೀಯ

ಪ್ರತಿಪಕ್ಷಗಳನ್ನು ಗುರಿಯಾಗಿಸಿ ಕೇಂದ್ರ ಸರ್ಕಾರದಿಂದ ಸ್ವತಂತ್ರ ತನಿಖಾ ಸಂಸ್ಥೆಗಳ ದುರ್ಬಳಕೆ - ಮಾಜಿ ಸಚಿವ ರೇವಣ್ಣ

Nagaraja AB

ಹಾಸನ: ರಾಜ್ಯದಲ್ಲಿ ಪ್ರತಿಪಕ್ಷಗಳ ಮುಖಂಡರನ್ನು ಗುರಿಯಾಗಿಸಿ ಸ್ವಾತಂತ್ರ  ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಮಾಜಿ ಸಚಿವ ಹೆಚ್. ಡಿ. ರೇವಣ್ಣ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಬಂಧಿಸಿರುವುದು ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದರು.

ರಾಜ್ಯದಲ್ಲಿ 7996 ಕೋಟಿ ರೂ. ನಷ್ಟದಲ್ಲಿ ನಡೆಯುತ್ತಿರುವ ಎಲ್ಲಾ ಐದು ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಕೋಟ್ಯಂತರ ರೂಪಾಯಿ ದುರುಪಯೋಗವಾಗಿದೆ. ನಷ್ಟವನ್ನು ಸರಿದೂಗಿಸಲು ಪ್ರತಿ ಯೂನಿಟ್ ಗೆ 0.40 ಪೈಸೆಯನ್ನು ಸರ್ಕಾರ ಹೆಚ್ಚಿಗೆ ಮಾಡಿದೆ. ತಾವೂ ಇಂಧನ ಸಚಿವರಾಗಿದ್ದಾಗ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಮೀಸಲು ನಿಧಿಯಾಗಿ 600 ಕೋಟಿ ರೂ. ಇಟ್ಟಿದ್ದಾಗಿ ರೇವಣ್ಣ ತಿಳಿಸಿದರು.

ಮಂಗಳೂರು ವಿಮಾನ ನಿಲ್ದಾಣದ ನಿರ್ವಹಣೆಯ ಗುತ್ತಿಗೆಯನ್ನು ಅಂಬಾನಿ ಸಮೂಹಕ್ಕೆ ನೀಡುವುದನ್ನು ಸಹ ರೇವಣ್ಣ ಟೀಕಿಸಿದರು.

SCROLL FOR NEXT