ಮುನಿರತ್ನ (ಸಂಗ್ರಹ ಚಿತ್ರ) 
ರಾಜಕೀಯ

ಆರ್ ಆರ್ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಭರ್ಜರಿ ಗೆಲುವು

ಆರ್ ಆರ್ ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.

ಬೆಂಗಳೂರು: ಆರ್ ಆರ್ ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.

ಈ ಹಿಂದೆ ಕಾಂಗ್ರೆಸ್ ನಿಂದ ಎರಡು ಬಾರಿ ಗೆಲುವು ಸಾಧಿಸಿದ್ದ ಮುನಿರತ್ನ ಅವರು ಈ ಬಾರಿ ಬಿಜೆಪಿ ಸೇರಿ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ.

ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಮುನಿರತ್ನ ಅವರು ಅಂತಿಮವಾಗಿ 57,672 ಮತಗಳ ಅಂತರದಿಂದ ಜಯ ಗಳಿಸಿದ್ದಾರೆ. ಬಿಜಿಪಿಯ ಮುನಿರತ್ನ ಅವರು ಒಟ್ಟು 125665 ಮತಗಳನ್ನು ಪಡೆದರೆ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ಅವರು 67993 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ.

ಬಿಜೆಪಿ ಮತ್ತು ಕಾಂಗ್ರೆಸ್‌ನ ಅಬ್ಬರದ ಪ್ರಚಾರ, ಆರೋಪ– ಪ್ರತ್ಯಾರೋಪ, ಜಾತಿ– ಕಣ್ಣೀರ ರಾಜಕಾರಣದ ಕಾರಣದಿಂದ ರಾಜರಾಜೇಶ್ವರಿ ನಗರದ ಉಪ ಚುನಾವಣೆ ಭಾರೀ ಕುತೂಹಲ ಕೆರಳಿಸಿತ್ತು. ಅಲ್ಲದೆ, ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ಮಧ್ಯೆ ಜಿದ್ದಾಜಿದ್ದಿನ ಪೈಪೋಟಿ ನಡೆಯಬಹುದು ಎಂದೇ ನಿರೀಕ್ಷಿಸಲಾಗಿತ್ತು. ಆದರೆ, ಮತದಾರ ಬಿಜೆಪಿ ‘ಕೈ’ ಹಿಡಿದಿರುವುದು ಬಹುತೇಕ ಸ್ಪಷ್ಟವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT