ಸಂಗ್ರಹ ಚಿತ್ರ 
ರಾಜಕೀಯ

ಕರ್ನಾಟಕ: 4 ವಿಧಾನಪರಿಷತ್ ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಕ್ಲೀನ್ ಸ್ವೀಪ್!

ಕರ್ನಾಟಕ ವಿಧಾನಪರಿಷತ್'ನ ನಾಲ್ಕು ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ನಾಲ್ಕು ಕ್ಷೇತ್ರಗಳಲ್ಲಿಯೂ ಗೆಲುವು ಸಾಧಿಸುವ ಮೂಲಕ ಕ್ಲೀನ್ ಸ್ವೀಪ್ ಸಾಧಿಸಿದೆ.

ಬೆಂಗಳೂರು: ಕರ್ನಾಟಕ ವಿಧಾನಪರಿಷತ್'ನ ನಾಲ್ಕು ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ನಾಲ್ಕು ಕ್ಷೇತ್ರಗಳಲ್ಲಿಯೂ ಗೆಲುವು ಸಾಧಿಸುವ ಮೂಲಕ ಕ್ಲೀನ್ ಸ್ವೀಪ್ ಸಾಧಿಸಿದೆ.

ಕಾಂಗ್ರೆಸ್ ವಶದಲ್ಲಿದ್ದ ಈಶಾನ್ಯ ಶಿಕ್ಷಕರ ಕ್ಷೇತ್ರ, ಜೆಡಿಎಸ್ ತೆಕ್ಕೆಯಲ್ಲಿದ್ದ ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಜಯಗಳಿಸಿ ಪಶ್ಚಿಮ ಪದವೀಧರ ಕ್ಷೇತ್ರವನ್ನು ಉಳಿಸಿಕೊಂಡಿತ್ತು. ಇದೀಗ ಆಗ್ನೇಯ ಪದವೀಧರ ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿ ಚಿದಾನಂದ ಗೌಡ ಗೆಲುವು ಸಾಧಿಸಿದ್ದಾರೆ.

ಚಿದಾನಂದ ಗೌಡ ಅವರು 24,217 ಮತಗಳನ್ನು ಪಡೆಯುವ ಮೂಲಕ ತಮ್ಮ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಡಿ.ಟಿ ಶ್ರೀನಿವಾಸ್ ಅವರನ್ನು ಸೋಲಿಸಿದ್ದಾರೆ. 

ನಾಲ್ಕು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿರುವುದರಿಂದ 75 ಸದಸ್ಯರು ಇರುವ ಮೇಲ್ಮನೆಯಲ್ಲಿ ಬಿಜೆಪಿಯ ಬಲ ಇನ್ನು ಮುಂದೆ 31ಕ್ಕೆ(ಈವರೆಗೆ 27 ಇತ್ತು) ಹೆಚ್ಚಾಗಿದೆ. ಕಾಂಗ್ರೆಸ್ 27(ಈವರೆಗೆ 28) ಹಾಗೂ ಜೆಡಿಎಸ್ ಬಲ 13ಕ್ಕೆ ಇಳಿದಿದೆ. ಉಳಿದಂತೆ ಸಭಾಪತಿ ಹಾಗೂ ಒಬ್ಬರು ಪಕ್ಷೇತರ ಸದಸ್ಯರಿದ್ದಾರೆ. 

ಆಗ್ನೇಯ ಪದವೀಧರ ಕ್ಷೇತ್ರದಲ್ಲಿಯೂ ಬಿಜೆಪಿ ಗೆಲುವು ಸಾಧಿಸಿದೆ. ಇನ್ನು ಪಕ್ಷೇತರರು ಬೆಂಬಲ ನೀಡಿದ್ದೇ ಆದರೆ ಬಿಜೆಪಿ ಬಲ 33ಕ್ಕೆ ಏರಿಕೆಯಾಗುವ ಸಾಧ್ಯತೆಗಳಿವೆ. ಪಕ್ಷೇತರರು ಬೆಂಬಲ ನೀಡಿದ್ದೇ ಆದರೆ, ಮೇಲ್ಮನೆಯಲ್ಲಿ ಬಿಜೆಪಿ ಏಕೈಕ ಅತೀದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಮೇಲ್ಮನೆಯಲ್ಲಿ ಬಹುಮತಕ್ಕೆ 38 ಸ್ಥಾನಗಳ ಅಗತ್ಯವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT