ಬಿಜೆಪಿ ಗೆಲುವಿನ ಸಂಭ್ರಮಾಚರಣೆ 
ರಾಜಕೀಯ

ಆರ್.ಆರ್.ನಗರ, ಶಿರಾದಲ್ಲಿ ಗೆದ್ದ ಕಮಲ: ಬಲ ಹೆಚ್ಚಿಸಿಕೊಂಡ ಬಿಜೆಪಿ; ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ನಾಯಕತ್ವಕ್ಕೆ ಸವಾಲು

ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಗೆದ್ದಿದೆ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಸ್ಥಾನ ಭದ್ರವಾಗಿದೆ. ರಾಜ್ಯ ಸರ್ಕಾರ ಇದೀಗ ಅಭಿವೃದ್ಧಿ ಕೆಲಸಗಳತ್ತ ಗಮನ ಹರಿಸಿದೆ. ನಾಯಕರ ಮಧ್ಯೆ ಭಿನ್ನಮತವೇ ಸೋಲಿಗೆ ಕಾರಣ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ಕೇಡರ್ ಮಟ್ಟದ ನಾಯಕರು ಆರೋಪಿಸುತ್ತಿದ್ದಾರೆ.

ಬೆಂಗಳೂರು: ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಗೆದ್ದಿದೆ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಸ್ಥಾನ ಭದ್ರವಾಗಿದೆ. ರಾಜ್ಯ ಸರ್ಕಾರ ಇದೀಗ ಅಭಿವೃದ್ಧಿ ಕೆಲಸಗಳತ್ತ ಗಮನ ಹರಿಸಿದೆ. ನಾಯಕರ ಮಧ್ಯೆ ಭಿನ್ನಮತವೇ ಸೋಲಿಗೆ ಕಾರಣ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ಕೇಡರ್ ಮಟ್ಟದ ನಾಯಕರು ಆರೋಪಿಸುತ್ತಿದ್ದಾರೆ.

ಈ ಉಪ ಚುನಾವಣೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಮತ್ತಷ್ಟು ಬಲ ಕೊಟ್ಟಿದೆ ಎಂದರೆ ತಪ್ಪಾಗಲಾರದು. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗುತ್ತದೆ ಎಂಬ ವದಂತಿಗಳಿಗೆ ಸದ್ಯಕ್ಕಂತೂ ವಿರಾಮ ಸಿಗಲಿದೆ.

ಈ ಫಲಿತಾಂಶ ನಮಗೆ ಮತ್ತು ನಮ್ಮ ಸರ್ಕಾರಕ್ಕೆ ಮತ್ತಷ್ಟು ಬಲ ನೀಡಿದ್ದು ಇನ್ನು ಮುಂದೆ ಅಭಿವೃದ್ಧಿಪರ ಕೆಲಸಗಳಿಗೆ ಹೆಚ್ಚಿನ ಒತ್ತು ನೀಡಲಿದ್ದೇವೆ, ಹೊಸ ಹೊಸ ಕಾರ್ಯಕ್ರಮಗಳನ್ನು, ಯೋಜನೆಗಳನ್ನು ತರಲಿದ್ದೇವೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಕೋವಿಡ್-19 ಸಾಂಕ್ರಾಮಿಕದಿಂದ ಹಿಂದುಳಿದಿದ್ದ ಅಭಿವೃದ್ಧಿಪರ ಕೆಲಸಗಳು ಇನ್ನು ವೇಗ ಪಡೆದುಕೊಳ್ಳುವ ಸಾಧ್ಯತೆಯಿದೆ. ಸಿಎಂ ಅವರ ಸ್ಥಾನ ಭದ್ರವಾಗಿರುವುದರಿಂದ ಅವರು ಆಡಳಿತಕ್ಕೆ, ಅಧಿಕಾರಿಗಳಿಗೆ ಇನ್ನಷ್ಟು ಕಾರ್ಯಪ್ರವೃತ್ತವಾಗುವಂತೆ ಉತ್ತೇಜಿಸುವ ಸಾಧ್ಯತೆಯಿದೆ.

ಆರ್ ಆರ್ ನಗರ ಮತ್ತು ಶಿರಾ ಕ್ಷೇತ್ರಗಳ ಉಪ ಚುನಾವಣೆ ಗೆಲುವು ಮುಂಬರುವ ಉಪ ಚುನಾವಣೆ, ಲೋಕಸಭೆ, ಬಿಬಿಎಂಪಿ ಮತ್ತು ಪಾಲಿಕೆ ಚುನಾವಣೆಗಳಿಗೆ ಆಡಳಿತಾರೂಢ ಬಿಜೆಪಿ ಪಕ್ಷಕ್ಕೆ ಮತ್ತಷ್ಟು ವಿಶ್ವಾಸವನ್ನು ಹೆಚ್ಚಿಸಲಿದೆ. 

ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಬಿಜೆಪಿ ಈ ಮತದಾನವನ್ನು ಹೊಸ ವಿಶ್ವಾಸದಿಂದ ಎದುರಿಸಲಿದೆ, ಆದರೆ ಪಕ್ಷದ ಮುಖ್ಯಸ್ಥರಾಗಿ ಡಿಕೆ ಶಿವಕುಮಾರ್ ಅಧಿಕಾರ ವಹಿಸಿಕೊಂಡ ನಂತರ ಕಾಂಗ್ರೆಸ್ ತನ್ನ ಕುಸಿತವನ್ನು ತಡೆಯುವ ಭರವಸೆಯನ್ನು ಹೊಂದಿದೆ. ಶಿವಕುಮಾರ್ ಸೋಲಿನ ಜವಾಬ್ದಾರಿಯನ್ನು ತೆಗೆದುಕೊಳ್ಳುವ ಮೂಲಕ ಧೈರ್ಯಶಾಲಿ ಮುಂಚೂಣಿಯಲ್ಲಿದ್ದರೂ, ಒಕ್ಕಲಿಗ ಪ್ರಾಬಲ್ಯದ ಕ್ಷೇತ್ರಗಳಲ್ಲಿ ಪ್ರಭಾವ ಬೀರಲು ವಿಫಲವಾದರೆ ಅವರ ನಾಯಕತ್ವವನ್ನು ಪರಿಶೀಲನೆಗೆ ಒಳಪಡಿಸಬಹುದು.

ಕಾಂಗ್ರೆಸ್ ಮೂಲಗಳು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಮಾಹಿತಿ ನೀಡಿ, ಚುನಾವಣೆಗೆ ಮುನ್ನ ಪಕ್ಷವು ಸ್ಪಷ್ಟವಾದ ಕಾರ್ಯತಂತ್ರವನ್ನು ಹೊಂದಿರಲಿಲ್ಲ ಮತ್ತು ಆರ್.ಆರ್.ನಗರದಲ್ಲಿ ಅದರ ಪ್ರಚಾರವು ಕೇವಲ ಬಿಜೆಪಿ ಅಭ್ಯರ್ಥಿಯನ್ನು ಟೀಕಿಸುವುದರ ಮೇಲೆ ಕೇಂದ್ರೀಕರಿಸಿತ್ತು. ಮುನಿರತ್ನ ಅವರು ಕಾಂಗ್ರೆಸ್ ತೊರೆದು ತಮ್ಮ ಬೆಂಬಲಿಗರೊಂದಿಗೆ ಬಿಜೆಪಿಗೆ ಸೇರಿದ ನಂತರ, ಸಿದ್ಧತೆಗಳನ್ನು ಪ್ರಾರಂಭಿಸಲು ಕಾಂಗ್ರೆಸ್ ಸಾಕಷ್ಟು ಸಮಯವನ್ನು ಹೊಂದಿತ್ತು, ಆದರೆ ಅದನ್ನು ಮಾಡಲು ವಿಫಲವಾಗಿದೆ ಎಂದು ಮೂಲಗಳು ತಿಳಿಸಿವೆ. ಕಾರ್ಯಕರ್ತರು ಮತ್ತು ನಾಯಕರ ನಡುವೆ ಸಂಪೂರ್ಣ ಸಂಪರ್ಕ ಕಡಿತಗೊಂಡಿದೆ, ಎಷ್ಟರಮಟ್ಟಿಗೆಂದರೆ, ಕಾಂಗ್ರೆಸ್ ತನ್ನ ಮತದಾರರನ್ನು ಮತದಾನ ಕೇಂದ್ರಗಳಿಗೆ ಸೇರಿಸಲು ವಿಫಲವಾಗಿದೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಮತ ಚಲಾಯಿಸಿದವರ ಬೆಂಬಲ ಈ ಬಾರಿ ಬಿಜೆಪಿಗೆ ದೊರೆತಿದೆ.

ಶಿರಾದಲ್ಲಿ, ಮತದಾರರೊಂದಿಗೆ ಟಿ ಬಿ ಜಯಚಂದ್ರ ಅವರ ಸ್ವಂತ ಸಂಪರ್ಕವೇ ಅವರಿಗೆ ಬಿಜೆಪಿ ಅಭ್ಯರ್ಥಿ ಜೊತೆಗೆ ಉತ್ತಮ ಹೋರಾಟ ನಡೆಸಲು ಸಹಾಯ ಮಾಡಿತು. ವಿವಿಧ ಬಣಗಳು ಸಮನ್ವಯದಿಂದ ಕೆಲಸ ಮಾಡದಿರುವ ಬಗ್ಗೆ ಕಾಂಗ್ರೆಸ್ ನೊಳಗೇ ಅಸಮಾಧಾನ ಪ್ರಾರಂಭವಾಗಿವೆ, ಡಿ ಕೆ ಶಿವಕುಮಾರ್ ಅವರಿಗೆ ದೊಡ್ಡ ಸವಾಲು ಎದುರಾಗಿದೆ. 

ಇನ್ನು ಜೆಡಿಎಸ್ ತನ್ನ ಅಸ್ಥಿತ್ವದ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಪರಿಸ್ಥಿತಿ ಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!