ಲಕ್ಷ್ಮೀ ಹೆಬ್ಬಾಳಕರ್ 
ರಾಜಕೀಯ

ಬಿಜೆಪಿ ಸರ್ಕಾರದಿಂದ ಕಾಂಗ್ರೇಸಿಗರ ಟಾರ್ಗೆಟ್: ವಿನಯ್ ಬೆನ್ನಿಂದೆ ಪಕ್ಷವಿದೆ: ಕುಟುಂಬ ಸದಸ್ಯರಿಗೆ ಧೈರ್ಯ ತುಂಬಿದ ಲಕ್ಷ್ಮಿ

ಶಾಸಕರೂ, ಕೆಪಿಸಿಸಿ ವಕ್ತಾರರೂ ಆಗಿರುವ ಲಕ್ಷ್ಮಿ ಹೆಬ್ಬಾಳಕರ್ ಧಾರವಾಡದ ಮಾಜಿ ಸಚಿವ ವಿನಯ್ ಕುಲಕರ್ಣಿ ನಿವಾಸಕ್ಕೆ ತೆರಳಿ ಕುಟುಂಬ ಸದಸ್ಯರಿಗೆ ಧೈರ್ಯ ತುಂಬಿದರು.

ಧಾರವಾಡ: ಶಾಸಕರೂ, ಕೆಪಿಸಿಸಿ ವಕ್ತಾರರೂ ಆಗಿರುವ ಲಕ್ಷ್ಮಿ ಹೆಬ್ಬಾಳಕರ್ ಧಾರವಾಡದ ಮಾಜಿ ಸಚಿವ ವಿನಯ್ ಕುಲಕರ್ಣಿ ನಿವಾಸಕ್ಕೆ ತೆರಳಿ ಕುಟುಂಬ ಸದಸ್ಯರಿಗೆ ಧೈರ್ಯ ತುಂಬಿದರು.

ಬಳಿಕ ಸುದ್ಜಿಗಾರರ ಜತೆ ಮಾತನಾಡಿದ ಅವರು, ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್ ಕುಲಕರ್ಣಿ ಜೈಲು ಸೇರಿದ್ದಾರೆ. 

ಬಿಜೆಪಿ ಸರಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಮುಖಂಡರು,  ಕಾರ್ಯಕರ್ತರನ್ನು ಟಾರ್ಗೆಟ್ ಮಾಡುತ್ತಿದೆ. ವಿನಾಕಾರಣ ಕಿರುಕುಳ ನೀಡುತ್ತಿದೆ. ಮುಂದಿನ ದಿನಗಳಲ್ಲಿ ಇದಕ್ಕೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೆಬ್ಬಾಳಕರ್ ಹೇಳಿದರು.

ವಿನಯ್ ಕುಲಕರ್ಣಿ ಜೊತೆಗೆ ಮತ್ತು ಅವರ ಕುಟುಂಬದ ಜೊತೆ ಸಂಪೂರ್ಣ ಕಾಂಗ್ರೆಸ್ ನಿಲ್ಲಲಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಹ ಅವರ ಮನೆಗೆ ಭೇಟಿ ನೀಡಲಿದ್ದಾರೆ. ಯಾವುದೇ ಕಾರಣದಿಂದ ಧೈರ್ಯ ಕಳೆದುಕೊಳ್ಳದಂತೆ, ಸತ್ಯಕ್ಕೆ ಜಯ ಸಿಕ್ಕೇ ಸಿಗುತ್ತದೆ ಎಂದು ಧೈರ್ಯ ಹೇಳಿರುವುದಾಗಿ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ