ಎಚ್. ಡಿ. ಕುಮಾರಸ್ವಾಮಿ 
ರಾಜಕೀಯ

ಎರಡು ಕ್ಷೇತ್ರಗಳ ಉಪ ಚುನಾವಣೆ, ಅಭ್ಯರ್ಥಿ ಕಣಕ್ಕಿಳಿಸುವುದು ವ್ಯರ್ಥ-  ಎಚ್ ಡಿ ಕುಮಾರಸ್ವಾಮಿ

ಮಸ್ಕಿ ಹಾಗೂ ಬಸವ ಕಲ್ಯಾಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದು ವ್ಯರ್ಥ. ಆದರೂ ಆ ಎರಡೂ ಕ್ಷೇತ್ರಗಳ ಮುಖಂಡರು, ಕಾರ್ಯಕರ್ತರ ಜೊತೆಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರು ಆಗಿರುವ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರು: ಮಸ್ಕಿ ಹಾಗೂ ಬಸವ ಕಲ್ಯಾಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದು ವ್ಯರ್ಥ. ಆದರೂ ಆ ಎರಡೂ ಕ್ಷೇತ್ರಗಳ ಮುಖಂಡರು, ಕಾರ್ಯಕರ್ತರ ಜೊತೆಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರು ಆಗಿರುವ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಮಲ್ಲಸಂದ್ರ ವಾರ್ಡ್ ಕಚೇರಿ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಮಂಡ್ಯ, ಶಿರಾ ಮತ್ತು ರಾಜರಾಜೇಶ್ವರಿ ನಗರದ ಉಪ ಚುನಾವಣೆಗಳ ಸೋಲಿನ ಬಳಿಕ ನಮಗೆ ಮತ್ತಷ್ಟು ಸವಾಲು ಎದುರಾಗಿದೆ. ಕಾರ್ಯಕರ್ತರು ಹುರುಪಿನಿಂದ ಪಕ್ಷಕ್ಕೆ ಪುನಶ್ಚೇತನ ನೀಡಲು ಸಿದ್ದರಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಚುನಾವಣೆಗಳಲ್ಲಿ ವ್ಯರ್ಥ ಕಸರತ್ತು ಹಾಕುವುದು ಸರಿಯಲ್ಲ, ಉಪ ಚುನಾವಣೆಗಳಲ್ಲಿ ಅಭ್ಯರ್ಥಿ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇನೆ ಎಂದರು.

ಜೆಡಿಎಸ್ ಪಕ್ಷ ಸಂಘಟನೆ ಚೆನ್ನಾಗಿಯೇ ಇದೆ. ಉಪ ಚುನಾವಣೆಗಳಲ್ಲಿ ಈಗ ಬಿಜೆಪಿಯ ವಿಧಾನವೇ ಬೇರೆ ಇದೆ. ಇಂಥ ಸಂದರ್ಭದಲ್ಲಿ ನಾವು ಉಪ ಚುನಾವಣೆ ಗೆಲ್ಲೋದು ಕಷ್ಟವೇ ಆಗಿದೆ. ಶಿರಾ ಮತ್ತು ರಾಜರಾಜೇಶ್ವರಿ ನಗರ ಉಪ ಚುನಾವಣೆಯಲ್ಲಿ ಹಣ ಹಾಗೂ ಅಧಿಕಾರ ಬಲದಿಂದ ಬಿಜೆಪಿ ಗೆಲುವು ಸಾಧಿಸಿದೆ ಎಂದು ಪರೋಕ್ಷವಾಗಿ ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!