ರಾಜಕೀಯ

ಬಿಜೆಪಿಯ ಡಾ. ಕೆ. ನಾರಾಯಣ್ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ 

Nagaraja AB

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆ ಸದಸ್ಯರಾಗಿ ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದ  ಡಾ. ಕೆ. ನಾರಾಯಣ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಶೋಕ್ ಗಸ್ತಿ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ಘೋಷಣೆಯಾಗಿತ್ತು.

ಸೋಮವಾರ ನಾಮಪತ್ರಗಳನ್ನು ವಾಪಸ್ ಪಡೆಯಲು ಕೊನೆಯ ದಿನವಾಗಿತ್ತು. ಬೇರೆ ಯಾವ ಪಕ್ಷದ ಅಭ್ಯರ್ಥಿಯೂ ನಾಮಪತ್ರ ಸಲ್ಲಿಸದ ಕಾರಣ ಡಾ. ಕೆ. ನಾರಾಯಣ ಅವರು ರಾಜ್ಯಸಭೆ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದು, ಉಪ ಚುನಾವಣಾಧಿಕಾರಿ, ರಾಜ್ಯ ವಿಧಾನಸಭಾ ಕಾರ್ಯದರ್ಶಿ ವಿಶಾಲಾಕ್ಷ್ಮಿ ಅವರು ಅಧಿಕೃತವಾಗಿ ಈ ಕುರಿತು ಘೋಷಣೆ ಮಾಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ  ನಳಿನ್‌ ಕುಮಾರ್‌ ಕಟೀಲ್‌ ನವೆಂಬರ್ 18ರಂದು ರಾಜ್ಯಸಭೆ ಉಪ ಚುನಾವಣೆ ಅಭ್ಯರ್ಥಿ ಡಾ. ಕೆ. ನಾರಾಯಣ ಅವರಿಗೆ ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ  ಬಿ-ಫಾರಂ ವಿತರಣೆ ಮಾಡಿದ್ದರು. ಅಂದೇ ನಾಮಪತ್ರವನ್ನು ಸಲ್ಲಿಸಲಾಗಿತ್ತು.

ಅವಿರೋಧವಾಗಿ ರಾಜ್ಯಸಭೆಗೆ ಆಯ್ಕೆಯಾದ ಡಾ. ಕೆ. ನಾರಾಯಣ್ ಅವರನ್ನು ಉಪ ಮುಖ್ಯಮಂತ್ರಿ ಡಾ. ಸಿ. ಎನ್.ಅಶ್ವತ್ ನಾರಾಯಣ, ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಸಚಿವ ಡಾ. ಕೆ. ಸುಧಾಕರ್ ಸೇರಿದಂತೆ ಹಲವು ಮುಖಂಡರು ಅಭಿನಂದಿಸಿದ್ದಾರೆ.

SCROLL FOR NEXT