ರಾಜಕೀಯ

ಮುಂಬರುವ ಚುನಾವಣೆಗೆ ಸಿದ್ಧತೆ: ನವೆಂಬರ್ 30 ರಂದು ಕಾಂಗ್ರೆಸ್ ಸಭೆ

Manjula VN

ಬೆಂಗಳೂರು: ರಾಜ್ಯದಲ್ಲಿ ಮುಂಬರುವ ಚುನಾವಣೆಗಳಿಗೆ ಸಿದ್ಥತೆ ನಡೆಸುವ ಸಲುವಾಗಿ ರಾಜ್ಯ ಕಾಂಗ್ರೆಸ್ ಪಕ್ಷದ ನಾಯಕರು ನ.30 ರಂದು ಸಭೆ ನಡೆಸಲಿದ್ದಾರೆ. 

ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯ ಸೋಲಿನ ಬಳಿಕ ಇತ್ತೀಚೆಗೆ ನಡೆದ ಎರಡು ವಿಧಾನಸಭೆ ಉಪಚುನಾವಣೆ, ನಾಲ್ಕು ವಿಧಾನಪರಿಶತ್ತಿನಲ್ಲಿ ಕ್ಷೇತ್ರಗಳ ಚುನಾವಣೆಯಲ್ಲಿ ಪಕ್ಷ ಹೀನಾಯವಾಗಿ ಸೋಲು ಕಂಡಿದ್ದು, ಮತ್ತೆ ಮೂರು ಕ್ಷೇತ್ರಗಳಲ್ಲಿ ಉಪಚುನಾವಣೆ ಎದುರಾಗಲಿದೆ. 

ಜೊತೆಗೆ ಗ್ರಾಮ ಪಂಚಾಯತ್ ಚುನಾವಣೆ ಮತ್ತು ಮುಂದಿನ ವರ್ಷ ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗಳು ಎದುರಾಗಲಿದ್ದು, ಈ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ. 

ಚುನಾವಣೆಯಲ್ಲಿ ಸುದೀರ್ಘವಾಗಿ ಸೋಲು ಕಾಣುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತಳಮಟ್ಟದಿಂದ ಪಕ್ಷವನ್ನು ಬಲಗೊಳಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಪಕ್ಷದ ಎಲ್ಲಾ ನಾಯಕರೂ ಒಂದು ದಿನ ಬೆಂಗಳೂರಿನ ಹೊರ ವಲಯದಲ್ಲಿ ವಿಶೇಷ ಸಭೆ ನಡೆಸಲಿದ್ದಾರೆಂದು ವರದಿಗಳು ತಿಳಿಸಿವೆ. 

ರಾಜರಾಜೇಶ್ವರಿ ನಗರ ಹಾಗೂ ಶಿರಾ ಉಪಚುನಾವಣೆಯಲ್ಲಿ ಸೋಂಕು ಕಂಡ ಹಿನ್ನೆಲೆಯಲ್ಲಿ ಸೋಲಿನ ಪರಾಮರ್ಶೆ ನಡೆಸಲಾಗುತ್ತದೆ ಎಂದು ಕೆಪಿಸಿಸಿ ಮೂಲಗಳು ಮಾಹಿತಿ ನೀಡಿದೆ. 

ಇತ್ತೀಚೆಗೆ ಉಪಚುನಾವಣೆಯಲ್ಲಿ ಸೋಲು ಕಂಡ ಬಳಿಕವಂತೂ ಮುಂದಿನ ಚುನಾವಣೆಗಳು ಅತ್ಯಂತ ಮುಖ್ಯವಾಗಿದೆ. ಪಕ್ಷದ ಹಿರಿಯ ನಾಯಕರದಲ್ಲಿ ಭಿನ್ನಭಿಪ್ರಾಯಗಳಿವೆ. ಈ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ ಎಂದು ತಿಳಿಸಿದೆ. 

SCROLL FOR NEXT