ಯಡಿಯೂರಪ್ಪ 
ರಾಜಕೀಯ

ಸಿಎಂ ಬಿಎಸ್ ವೈ ಸಭೆಗೆ ಅರ್ಧಕ್ಕೂ‌ ಹೆಚ್ಚಿನ ಸಂಸದರು ಗೈರು, ಅರ್ಧ ಗಂಟೆಯಲ್ಲೇ ಮುಗಿದ ಅನೌಪಚಾರಿಕ ಸಭೆ!

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯದ ಬಿಜೆಪಿ ಸಂಸದರ ಸಭೆ ನಡೆಸಿದರು. ಸಭೆಗೆ ಕೇವಲ 11 ಸಂಸದರು ಮಾತ್ರ ಆಗಮಿಸಿದ್ದು, ಕೇವಲ ಅರ್ಧ ಗಂಟೆಯಲ್ಲಿ ಸಭೆಯನ್ನು ಮುಗಿಸಲಾಯಿತು.

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯದ ಬಿಜೆಪಿ ಸಂಸದರ ಸಭೆ ನಡೆಸಿದರು. ಸಭೆಗೆ ಕೇವಲ 11 ಸಂಸದರು ಮಾತ್ರ ಆಗಮಿಸಿದ್ದು, ಕೇವಲ ಅರ್ಧ ಗಂಟೆಯಲ್ಲಿ ಸಭೆಯನ್ನು ಮುಗಿಸಲಾಯಿತು.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಸಂಸದರಾದ ಶಿವಕುಮಾರ್ ಉದಾಸಿ, ಅಮರೇಶ ನಾಯ್ಕ್, ಸಂಗಣ್ಣ ಕರಡಿ, ದೇವೇಂದ್ರಪ್ಪ, ಪ್ರತಾಪ್ ಸಿಂಹ, ಜಿ ಎಸ್ ಬಸವರಾಜು, ಬಿ ವೈ ರಾಘವೇಂದ್ರ, ಉಮೇಶ್ ಜಾಧವ್, ಪಿ ಸಿ ಗದ್ದಿಗೌಡರ್, ರಾಜ್ಯಸಭೆ ಸದಸ್ಯ ಕೆ ಸಿ ರಾಮಮೂರ್ತಿ, ಡಾ.ಕೆ.ನಾರಾಯಣ ಭಾಗಿಯಾಗಿದ್ದರು.

24 ಸಂಸದರನ್ನು ಹೊಂದಿದ್ದರೂ ದೆಹಲಿಯಲ್ಲಿ ಕೇಂದ್ರ ಸಚಿವರಿದ್ದು, ಗ್ರಾಮ ಸ್ವರಾಜ್ಯ ಸಮಾವೇಶದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಶೋಭಾ ಕರಂದ್ಲಾಜೆ ಭಾಗಿಯಾಗಿದ್ದಾರೆ. ಹಾಗಾಗಿ ಅರ್ಧಕ್ಕೂ ಕಡಿಮೆ ಸಂಸದರು ಮಾತ್ರ ಆಗಮಿಸಿದ್ದರು. ಸಂಸದರೊಂದಿಗೆ ಸಿಎಂ ಯಡಿಯೂರಪ್ಪ ಅನೌಪಚಾರಿಕ ಸಭೆಯನ್ನು ಮಾತ್ರ ಮಾಡಿದರು ಎನ್ನಲಾಗಿದೆ.

ಕೇಂದ್ರ ಬಜೆಟ್ ಪೂರ್ವಭಾವಿ ಸಭೆ ಆರಂಭಗೊಳ್ಳಲಿರುವವ ಹಿನ್ನಲೆಯಲ್ಲಿ ರಾಜ್ಯದ ಯೋಜನೆಗಳ ಕುರಿತು ಕೇಂದ್ರಕ್ಕೆ ಪ್ರಸ್ತಾವನೆಗಳನ್ನು ಸಲ್ಲಿಸಲು ಪೂರಕವಾಗಿ ಸಂಸದರೊಂದಿಗೆ ಸಿಎಂ ಸಮಾಲೋಚನೆ ನಡೆಸಿದರು. ಆಯಾ ಸಂಸದರೊಂದಿಗೆ ಅವರವರ ಕ್ಷೇತ್ರದ ಬೇಡಿಕೆ ಕುರಿತು ಮಾಹಿತಿ ಸಂಗ್ರಹಿಸಿದರು ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜತಾಂತ್ರಿಕತೆಗಿಂತ ದೊಡ್ಡ ಆಯುಧವಿಲ್ಲ, ಮಧ್ಯಪ್ರಾಚ್ಯ ಸಂಘರ್ಷ ಅಂತ್ಯಕ್ಕೆ ಶಾಂತಿಯುತ ಮಾತುಕತೆಯೇ ಏಕೈಕ ಮಾರ್ಗ: ಪ್ರಧಾನಿ ಮೋದಿ

Hormuz ಉದ್ವಿಗ್ನತೆ ತೀವ್ರ: Chabahar port ಗುರಿಯಾಗಿಸಿ ಅಮೆರಿಕಾ ಭೀಕರ ದಾಳಿ, Iranಗೆ ಮತ್ತೊಂದು ಪ್ರಬಲ ಹೊಡೆತ..!

ವರುಣಾರ್ಭಟಕ್ಕೆ ಉತ್ತರ ಭಾರತ ತತ್ತರ; ದೆಹಲಿ ಜಲಾವೃತ, ಜನಜೀವನ ಅಸ್ತವ್ಯಸ್ತ, Red ಅಲರ್ಟ್ ಘೋಷಣೆ..!

ಮುರಿದುಬಿದ್ದ ಶಾಂತಿ ಒಪ್ಪಂದ: ಇರಾನ್ ಮೇಲೆ ಅಮೆರಿಕ ಭಾರಿ ವೈಮಾನಿಕ ದಾಳಿ; ಮೂರು ಗಲ್ಫ್ ರಾಷ್ಟ್ರಗಳ ಮೇಲೆ ಟೆಹ್ರಾನ್ ಪ್ರತಿದಾಳಿ, ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ..!

ಮದುವೆ ವೇಳೆ ಕ್ಷುಲ್ಲಕ ಕಾರಣಕ್ಕೆ ಜಗಳ: ಭೀಕರ ತಿರುವು, ತಿರುಪತಿಯಲ್ಲಿ ಡಬಲ್ ಮರ್ಡರ್