ವಿ.ಶ್ರೀನಿವಾಸ್ ಪ್ರಸಾದ್ 
ರಾಜಕೀಯ

'ಸಿದ್ದರಾಮಯ್ಯ ಅವರಿಗೆ ಬುದ್ದಿವಂತಿಕೆ ಇರಲಿಲ್ಲ, ಅವರು ಮಾಡಿದ ತಪ್ಪನ್ನು ನೀವು ಮಾಡಬೇಡಿ'

ಸಿದ್ದರಾಮಯ್ಯನವರಿಗೆ ಬುದ್ದಿವಂತಿಕೆ ಇರಲಿಲ್ಲ. ಸಿಎಂ ಯಡಿಯೂರಪ್ಪನವರಿಗೆ ಅದನ್ನೇ ಹೇಳುತ್ತಿದ್ದೇನೆ. ಸಿದ್ದರಾಮಯ್ಯ ಮಾಡಿದ ತಪ್ಪನ್ನು ನೀವು ಮಾಡಬೇಡಿ, ಸ್ವಲ್ಪ ಬುದ್ದಿವಂತಿಕೆಯಿಂದ ತೀರ್ಮಾನ ತಗೊಳ್ಳಿ ಎಂದು ಹೇಳುತ್ತಿದ್ದೇನೆ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಮತ್ತೊಮ್ಮೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೈಸೂರು: ಅಧಿಕಾರ ಕೆಲವೊಮ್ಮೆ ಎಲ್ಲರನ್ನೂ ಬದಲಾವಣೆ ಮಾಡಿಸಿಬಿಡುತ್ತದೆ. ಸಿಎಂ ಯಡಿಯೂರಪ್ಪ ಹಿಂದಿಗಿಂತ ಬದಲಾಗಿದ್ದಾರೆ ಎಂದು ಹೇಳೋಕೆ ಆಗುವುದಿಲ್ಲ. ಹಾಗಂತ ಅವರು ಬದಲಾಗಿಲ್ಲ  ಎಂದು ಹೇಳುವುದಕ್ಕಾಗುವುದಿಲ್ಲ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಮತ್ತೊಮ್ಮೆ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಶ್ರೀನಿವಾಸ್ ಪ್ರಸಾದ್,  ಸಿಎಂ ಆಗಿ ಅಧಿಕಾರ ನಡೆಸುವುದು ಬಹಳ ಕಠಿಣ ಕೆಲಸ. ನಿಗಮ ಮಂಡಳಿ ಆಯ್ಕೆ ವಿಚಾರ‌ದಲ್ಲಿ ನನಗೆ ಅತೃಪ್ತಿ ಇದೆ. ಇನ್ನೂ ಉತ್ತಮವಾಗಿ ಅಧ್ಯಕ್ಷರ ನೇಮಕಾತಿ ಮಾಡಬಹುದಿತ್ತು. ಎಲ್ಲರ ಸಲಹೆ ಪಡೆದು ಮಾಡಬಹುದಿತ್ತು ಎಂಬುದು ನನ್ನ ಅಭಿಪ್ರಾಯ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯನವರಿಗೆ ಬುದ್ದಿವಂತಿಕೆ ಇರಲಿಲ್ಲ. ಸಿಎಂ ಯಡಿಯೂರಪ್ಪನವರಿಗೆ ಅದನ್ನೇ ಹೇಳುತ್ತಿದ್ದೇನೆ. ಸಿದ್ದರಾಮಯ್ಯ ಮಾಡಿದ ತಪ್ಪನ್ನು ನೀವು ಮಾಡಬೇಡಿ, ಸ್ವಲ್ಪ ಬುದ್ದಿವಂತಿಕೆಯಿಂದ ತೀರ್ಮಾನ ತಗೊಳ್ಳಿ ಎಂದು ಯಡಿಯೂರಪ್ಪನವರಿಗೆ ಹೇಳುತ್ತಿದ್ದೇನೆ ಎಂದ ಅವರು ನಾಯಕತ್ವ ಬದಲಾವಣೆ ಸಂಬಂಧ ಪ್ರತಿಕ್ರಿಯಿಸಲು ನಿರಾಕರಿಸಿದರು. 

ಉಪ ಚುನಾವಣೆಯಲ್ಲಿ ಒಳ್ಳೆಯ ಫಲಿತಾಂಶ ಬಂದಿದೆ. ಇದಕ್ಕಾಗಿ ಹೀಗ್ಗಿ ಹೀರೇಕಾಯಿ ಆಗಬೇಕಿಲ್ಲ. ವಿಪಕ್ಷಗಳು ಕುಸಿದು ಹೋಗಿವೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!