ನಳಿನ್ ಕುಮಾರ್ ಕಟೀಲ್ 
ರಾಜಕೀಯ

ಗ್ರಾಮ ಪಂಚಾಯತಿ ಚುನಾವಣೆಗಳು ಭವಿಷ್ಯದ ನಾಯಕನನ್ನು ರೂಪಿಸುತ್ತವೆ: ನಳಿನ್ ಕುಮಾರ್ ಕಟೀಲ್

ಮುಂಬರುವ ಗ್ರಾಮ ಪಂಚಾಯತಿ ಚುನಾವಣೆಗಳಲ್ಲಿ ಸ್ಥಳೀಯ ಮತ್ತು ಎಲ್ಲಾ ಸಂಪನ್ಮೂಲಗಳನ್ನು ಬಳಸಿಕೊಂಡು ಚುನಾವಣೆ ಎದುರಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ,

ಉಡುಪಿ: ಮುಂಬರುವ ಗ್ರಾಮ ಪಂಚಾಯತಿ ಚುನಾವಣೆಗಳಲ್ಲಿ ಸ್ಥಳೀಯ ಮತ್ತು ಎಲ್ಲಾ ಸಂಪನ್ಮೂಲಗಳನ್ನು ಬಳಸಿಕೊಂಡು ಚುನಾವಣೆ ಎದುರಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ,

ಉಡುಪಿಯಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶದಲ್ಲಿ ಮಾತನಾಡಿದ ಅವರು, ಪಂಚಾಯಿತಿಯಿಂದ ಪಾರ್ಲಿಮೆಂಟ್‍ವರೆಗೆ ಕಾಂಗ್ರೆಸ್ ಮುಕ್ತ ಮಾಡುವ ಸಂಕಲ್ಪದೊಂದಿಗೆ ಶೇ.80ರ ಗೆಲುವಿನ ಗುರಿ ಇಟ್ಟಿದ್ದೇವೆ. ಮಹಾತ್ಮ ಗಾಂಧಿಯ ಗ್ರಾಮ ಸ್ವರಾಜ್ಯ, ಪ್ರಧಾನಿಯ ಆದರ್ಶ ಗ್ರಾಮ ಹಾಗೂ ಸಾಮಾನ್ಯ ಕಾರ್ಯಕರ್ತನನ್ನು ನಾಯಕನ್ನಾಗಿಸುವ ಚಿಂತನೆಯಲ್ಲಿ ಈ ಬಾರಿಯ ಚುನಾವಣೆಯನ್ನು ಎದುರಿಸುತ್ತೇವೆ ಎಂದರು. 

ಸ್ಥಳೀಯ ಆಡಳಿತವನ್ನು ಸಬಲೀಕರಣಗೊಲಿಸಲು ಗ್ರಾಮಪಂಚಾಯತಿ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವುದಾಗಿ ಕಟೀಲ್ ಹೇಳಿದ್ದಾರೆ.

ರಾಜ್ಯದ 5,800 ಗ್ರಾಮ ಪಂಚಾಯತಿಗಳಲ್ಲಿ 96ಸಾವಿರ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಯಡಿಯೂರಪ್ಪ ಸರ್ಕಾರಗಳು ಮಾಡಿರುವ ಉತ್ತಮ ಕೆಲಸಗಳನ್ನು ಜನರಿಗೆ ಮನವರಿಕೆ ಮಾಡಿಕೊಡುವುದಾಗಿ ತಿಳಿಸಿದ್ದಾರೆ.

ಸರ್ಕಾರ ಮಾಡಿರುವ ಕೆಲಸಗಳ ಆಧಾರದ ಮೇಲೆ ನಮ್ಮ ಕಾರ್ಯಕರ್ತರು ಮತದಾರರ ಬಳಿ ಮತ ಕೇಳಲಿದ್ದಾರೆ ಎಂದರು.
ಸಂಪುಟ ವಿಸ್ತರಣೆಗಾಗಿ ಕೆಲವು ನಾಯಕರು ದೆಹಲಿಗೆ ತೆರಳಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು ಇಂತಹ ವರದಿಗಳನ್ನು ಹಬ್ಬಿಸಬಾರದು, ತಮ್ಮ ತಮ್ಮ ಇಲಾಖೆಗಳ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನ ಕೋರಲು ದೆಹಲಿಗೆ ತೆರಳಿದ್ದಾರೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್