ರಾಜಕೀಯ

ಕಾಂಗ್ರೆಸ್ ನಾಯಕರಿಂದ ಚುನಾವಣಾ ಸೋಲಿನ ಪರಾಮರ್ಶೆ

Manjula VN

ಬೆಂಗಳೂರು: ವಿಧಾನಸಭೆ, ಲೋಕಸಭೆ ಸೇರಿದಂತೆ ಎಲ್ಲ ಚುನಾವಣೆಗಳಲ್ಲಿ ಪಕ್ಷ ಹೀನಾಯವಾಗಿ ಸೋಲುತ್ತಿರುವುದು ಹಾಗೂ ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆ ಮಾಡುವ ಕುರಿತು ರಾಜ್ಯ ಕಾಂಗ್ರೆಸ್ ಹಿರಿಯ ನಾಯಕರ ಸಭೆ ನಡೆಯುತ್ತಿದೆ.

ದೇವನಹಳ್ಳಿ ಬಳಿ ಕ್ಲಾಕ್ ಎಕ್ಸರ್ಟಿಕಾ ದಲ್ಲಿ ನಡೆಯುತ್ತಿರುವ ಸಭೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಕಾರ್ಯದರ್ಶಿಗಳಾಗಿರುವ ಎಚ್.ಕೆ.ಪಾಟೀಲ್, ದಿನೇಶ್ ಗುಂಡೂರಾವ್, ಕೆಪಿಸಿಸಿ ಮಾಜಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಸೇರಿದಂತೆ ಸುಮಾರು 80 ಪಕ್ಷದ ಹಿರಿಯ ಮುಖಂಡರು ಪಾಲ್ಗೊಂಡಿದ್ದಾರೆ.

ಸಭೆಯಲ್ಲಿ ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ, ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಪಕ್ಷ ಬೆಂಬಲಿತ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸಿಕೊಂಡು ಬರಲು ಮಾಡಬೇಕಾದ ಕಾರ್ಯತಂತ್ರಗಳು ಹಾಗೂ ಬಸವಕಲ್ಯಾಣ, ಮಸ್ಕಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಮತ್ತು ಬೆಳಗಾವಿ ಲೋಕಸಭಾ ಉಪ ಚುನಾವಣೆ ಕಾರ್ಯತಂತ್ರಗಳ ಕುರಿತು ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.

SCROLL FOR NEXT