ನಳಿನ್ ಕುಮಾರ್ ಕಟೀಲ್ 
ರಾಜಕೀಯ

ಸಿ.ಟಿ.ರವಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ, ಪಕ್ಷದ ನಿಯಮದಂತೆ ನಡೆದುಕೊಳ್ತಾರೆ: ನಳಿನ್ ಕುಮಾರ್ ಕಟೀಲ್

ನಮ್ಮ ಪಕ್ಷದಲ್ಲಿ ಒಬ್ಬರಿಗೆ ಒಂದೇ ಸ್ಥಾನ ನಿಯಮವಿರುವುದರಿಂದ ಸಿ.ಟಿ ರವಿ ಸ್ವಯಂ ಪ್ರೇರಿತರಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ತುಮಕೂರು: ನಮ್ಮ ಪಕ್ಷದಲ್ಲಿ ಒಬ್ಬರಿಗೆ ಒಂದೇ ಸ್ಥಾನ ನಿಯಮವಿರುವುದರಿಂದ ಸಿ.ಟಿ ರವಿ ಸ್ವಯಂ ಪ್ರೇರಿತರಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಶಿರಾ ಉಪ ಚುನಾವಣೆ ಸಂಬಂಧ ಕಳ್ಳಂಬೆಳ್ಳದಲ್ಲಿ ಬೂತ್ ಮಟ್ಟದ ಕಾರ್ಯಾಗಾರ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಬ್ಬರಿಗೆ ಒಂದೇ ಹುದ್ದೆ ಎಂಬ ಪಕ್ಷದ ಅಲಿಖಿತ ನಿಯಮವನ್ನು ವರಿಷ್ಠರು ಬದಲಿಸಿದ್ದಾರೆ ಎಂದು ಹೇಳುವ ಮೂಲಕ ತಮಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ಹಾ ಗೂ ಸಚಿವ ಸ್ಥಾನ ಎರಡನ್ನೂ ನಿಭಾಯಿಸುವ ಸಾಮರ್ಥ್ಯವಿದೆ ಎಂದು ಪರೋಕ್ಷವಾಗಿ ಸಿ.ಟಿ ರವಿ ಹೇಳಿದ್ದರು.

ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ನಳೀನ್ ಕುಮಾರ್ ಕಟೀಲ್,ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ.ರಾಜೀ ನಾಮೆ ಪತ್ರ ಕೂಡ ರೆಡಿ ಇದೆ ಎಂದು ಸಿ.ಟಿ ರವಿಯವರೇ ಹೇಳಿದ್ದಾರೆ.ಅಲ್ಲದೆ ನಮ್ಮ ಪಕ್ಷದ ನಿಯಮದ ಪ್ರಕಾರ ಒಬ್ಬರಿಗೆ ಒಂದೇ ಹುದ್ದೆ.ಹಾಗಾಗಿ ಸಿ.ಟಿ ರವಿ ರಾಜೀನಾಮೆ ಕೊಡುತ್ತಾರೆ ಎಂದು ಹೇಳಿದ್ದಾರೆ. 

ಇದೇ ವೇಳೆ ಹತ್ರಾಸ್ ಅತ್ಯಾಚಾರ ಪ್ರಕರಣದ ಬಗ್ಗೆ ಮಾತನಾಡಿದ ಕಟೀಲ್, ರೇಪ್ ಪ್ರಕರಣವನ್ನು ರಾಹುಲ್ ಗಾಂಧಿ ರಾಜಕೀಯ ಮಾಡಲು ಹೊರಟಿದ್ದಾರೆ ಎಂದು ತಿರುಗೇಟು ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ