ಸಿಟಿ ರವಿ 
ರಾಜಕೀಯ

ಅಲಿಖಿತ ನಿಯಮ 75 ವರ್ಷ ದಾಟಿದವರಿಗೂ ಅನ್ವಯಿಸುತ್ತೆ: ಪರೋಕ್ಷವಾಗಿ ಸಿಎಂ ಯಡಿಯೂರಪ್ಪಗೆ ಸಿಟಿ ರವಿ ಟಾಂಗ್

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎನ್ನಲಾಗಿತ್ತು. ಆದರೆ ಇದೀಗ ಸಚಿವರು ತಮ್ಮ ವರಸೆ ಬದಲಿಸಿದ್ದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂಬ ಸಂದೇಶ ರವಾನಿಸಿದ್ದಾರೆ.

ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎನ್ನಲಾಗಿತ್ತು. ಆದರೆ ಇದೀಗ ಸಚಿವರು ತಮ್ಮ ವರಸೆ ಬದಲಿಸಿದ್ದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂಬ ಸಂದೇಶ ರವಾನಿಸಿದ್ದಾರೆ.

ರಾಜೀನಾಮೆ ನೀಡುವ ಕುರಿತು ವರದಿಗಾರರಿಗೆ ಪ್ರತಿಕ್ರಿಯಿಸಿದ ಸಿ.ಟಿ ರವಿ, ನಮ್ಮಲ್ಲಿ ಒಬ್ಬರಿಗೆ ಒಂದು ಸ್ಥಾನ ಎಂಬ ಅಲಿಖಿತ ನಿಯಮವಿದೆ. ಇದೇ ರೀತಿ 75 ವರ್ಷ ದಾಟಿದವರು ಅಧಿಕಾರ, ರಾಜಕೀಯದಿಂದ ನಿವೃತ್ತಿ ಹೊಂದಬೇಕು ಎಂಬ ನಿಯಮವೂ ಇದೆ. ಆದರೆ ಕೆಲವೊಮ್ಮೆ ವರಿಷ್ಠರೇ ಅಲಿಖಿತ ನಿಯಮಗಳನ್ನು ಬದಲಾವಣೆ ಮಾಡಿದ್ದಾರೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಟಾಂಗ್ ನೀಡಿದ್ದಾರೆ.

ಅಲಿಖಿತ ನಿಯಮಗಳನ್ನು ಬದಲಾಯಿಸಿದ್ದು, ಪಕ್ಷದ ವರಿಷ್ಠ ಮಂಡಳಿಯ ನಿರ್ಧಾರ. ಆದರೆ ಬಿಜೆಪಿ ಪಕ್ಷದ ಕಾರ್ಯಕರ್ತನಾಗಿ ಹಾಗೂ ವ್ಯಕ್ತಿಗತ ಆಯ್ಕೆಯಂತೆ ನನಗೆ ಸಂಘಟನೆಯೇ ಮುಖ್ಯ ಎಂದು ಸಿಟಿ ರವಿ ಸ್ಪಷ್ಟಪಡಿಸಿದರು.

ಈ ಹಿಂದೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತು ಮಾತನಾಡಿದ್ದ ಸಿಟಿ ರವಿ, ಪಕ್ಷವೋ, ಸರ್ಕಾರವೋ ಎಂದು ಕೇಳಿದಾಗ ನಾನು ಪಕ್ಷಕ್ಕೆ ಪ್ರಾಮುಖ್ಯತೆ ನೀಡುತ್ತೇನೆ. ರಾಷ್ಟ್ರೀಯ ರಾಜಕಾರಣಕ್ಕೆ ತೆರಳಿದರೂ ನಮ್ಮ ಬೇರುಗಳು ಇಲ್ಲೇ ಇದೆ. ಪಕ್ಷದ ವರಿಷ್ಠರು ಯಾವಾಗ ರಾಜೀನಾಮೆಗೆ ಸೂಚಿಸುತ್ತಾರೋ ಅಂದೇ ರಾಜೀನಾಮೆ ನೀಡುತ್ತೇನೆ ಎಂದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!