ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 
ರಾಜಕೀಯ

ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಖಾತೆ ತೆರೆದಂತೆ ಶಿರಾದಲ್ಲೂ ಖಾತೆ ತೆರೆಯಲು ಹವಣಿಸುತ್ತಿರುವ ಬಿಜೆಪಿ!

ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗಾಗಿ ಎಂಟು ಉಸ್ತುವಾರಿಗಳನ್ನು ನಿಯೋಜಿಸುವ ಮೂಲಕ ಬಿಜೆಪಿ, ಹೇಗಾದರೂ ಮಾಡಿ ಉಪ ಚುನಾವಣೆಯಲ್ಲಿ ಗೆಲ್ಲಲಬೇಕೆಂಬ ಪಣ ತೊಟ್ಟಿದೆ.

ಬೆಂಗಳೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗಾಗಿ ಎಂಟು ಉಸ್ತುವಾರಿಗಳನ್ನು ನಿಯೋಜಿಸುವ ಮೂಲಕ ಬಿಜೆಪಿ, ಹೇಗಾದರೂ ಮಾಡಿ ಉಪ ಚುನಾವಣೆಯಲ್ಲಿ ಗೆಲ್ಲಲಬೇಕೆಂಬ ಪಣ ತೊಟ್ಟಿದೆ.

ಶಿರಾದಲ್ಲಿ  ಎಂದಿಗೂ ಜಯಗಳಿಸದ ಪಕ್ಷ, ಶಿರಾದಲ್ಲಿ ಗೆಲ್ಲುವುದು ಮಾತ್ರವಲ್ಲದೆ,  ಕ್ಷೇತ್ರವನ್ನು ಭದ್ರಪಡಿಸಿಕೊಳ್ಳುವ ಮೂಲಕ ತನ್ನ ವಿಸ್ತರಣೆಯನ್ನು ಮುಂದುವರೆಸಬೇಕೆಂದು ಬಯಸಿದೆ. ಯಾವಾಗಲೂ ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವಣ ಅಭ್ಯರ್ಥಿಗಳನ್ನು ನೋಡಿ ತನ್ನ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಿದೆ.

ಜಾತಿ, ಪಕ್ಷದ ಕಾರ್ಯಕರ್ತರ ಒಲವು ಮತ್ತಿತರ ಸಮತೋಲಿತ ಕಾರ್ಯತಂತ್ರಗಳ ಮೂಲಕ ಇಬ್ಬರು ಉಪ ಮುಖ್ಯಮಂತ್ರಿಗಳು ಸೇರಿದಂತೆ ಎಂಟು ಉಸ್ತುವಾರಿಗಳನ್ನು ಬಹಳ ಎಚ್ಚರಿಕೆಯಿಂದ ಆಯ್ಕೆ ಮಾಡಲಾಗಿದೆ.

ಪರಿಶಿಷ್ಟ ಜಾತಿಗೆ ಸೇರಿದ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್, ಸಂಸದ ಎ. ನಾರಾಯಣಸ್ವಾಮಿ, ಶಾಸಕಿ ಪೂರ್ಣಿಮಾ ಶ್ರೀನಿವಾಸ್, ತಿಪ್ಪೇಸ್ವಾಮಿ, ಹಿಂದುಳಿದ ಸಮುದಾಯದ ಮುಖಂಡ ಸಂಸದ ಪಿ. ಸಿ. ಮೋಹನ್, ಒಕ್ಕಲಿಗ ಮುಖಂಡರಾದ ಉಪ ಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವತ್ ನಾರಾಯಣ, ಲಿಂಗಾಯಿತ ಮುಖವಾಗಿ ಬಿ. ವೈ.ವಿಜಯೇಂದ್ರ ಅವರನ್ನು ಉಸ್ತುವಾರಿಯಾಗಿ ನೇಮಕ ಮಾಡುವ ಮೂಲಕ ಒಕ್ಕಲಿಗ ಮತ್ತು ಗೊಲ್ಲ ಸಮುದಾಯ ಹೆಚ್ಚಿನ ಸಂಖ್ಯೆಯಿರುವ ಕ್ಷೇತ್ರದಲ್ಲಿ ಮತದಾರರನ್ನು ಸೆಳೆಯಲು ಕಾರ್ಯತಂತ್ರ ರೂಪಿಸಲಾಗಿದೆ.

ಕೆ.ಆರ್. ಪೇಟೆ ಕ್ಷೇತ್ರದಲ್ಲಿ ಮಾಡಿದಂತೆ ಮನೆ- ಮನೆಗೆ ಹೋಗುವುದು, ವಾರ್ಡ್ ಮಟ್ಟ, ಕಾರ್ನರ್ ಮಟ್ಟ, ಬ್ಲಾಕ್ ಮಟ್ಟದ ಮೂಲಕ ಚುನಾವಣೆ ಎದುರಿಸಲು ಬಿಜೆಪಿ ರಣತಂತ್ರ ರೂಪಿಸಿದೆ. ಆದರೆ, ಕೆ. ಆರ್. ಪೇಟೆಯಂತೆ ಶಿರಾದಲ್ಲಿ ಸ್ಥಳೀಯ ಕಾರ್ಯಕರ್ತರಲ್ಲಿ ಯಾವುದೇ ತೊಂದರೆ ಎದುರಾಗುವುದಿಲ್ಲ, ಶಿರಾದ ಸುತ್ತಮುತ್ತ ನಾಲ್ವರು ಶಾಸಕರಿದ್ದು, ನಿರಂತರವಾಗಿ ತನ್ನ ಮುಖವನ್ನು ಹೆಚ್ಚಿಸಿಕೊಳ್ಳುತ್ತಿದೆ.

ತುಮಕೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಯ ನಾಲ್ವರು ಶಾಸಕರಿದ್ದಾರೆ . ಕಾಂಗ್ರೆಸ್ ಮೂರು ಹಾಗೂ ಜೆಡಿಎಸ್ ಮೂರು ಸ್ಥಾನಗಳನ್ನು ಹೊಂದಿದೆ. ಅಭಿವೃದ್ಧಿಯ ಭರವಸೆಯೊಂದಿಗೆ ಬಿಜೆಪಿ ಪ್ರಚಾರ ನಡೆಸುತ್ತಿದ್ದರೆ ಹೊಸ ಮುಖಗಳೊಂದಿಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪ್ರಚಾರ ನಡೆಸುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT