ರಾಜಕೀಯ

ವಿಧಾನ ಪರಿಷತ್ ಚುನಾವಣೆ: ಬಿಜೆಪಿಯಿಂದ ನಾಲ್ವರು ಅಭ್ಯರ್ಥಿಗಳ ಘೋಷಣೆ

Raghavendra Adiga

ಬೆಂಗಳೂರು: ಕರ್ನಾಟಕ ಹಾಗೂ ಬಿಹಾರದ ವಿಧಾನ ಪರಿಷತ್ ಚುನಾವಣೆಗೆ ಭಾರತೀಯ ಜನತಾ ಪಕ್ಷ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.

ಬಿಹಾರದಲ್ಲಿ ವಿಧಾನ ಪರಿಷತ್ ಗೆ ಐವರು ಕರ್ನಾಟಕ ವಿಧಾನ ಪರಿಷತ್ ಗೆ ನಾಲ್ವರು ಅಭ್ಯರ್ಥಿಗಳನ್ನು ಫೈನಲ್ ಮಾಡಲಾಗಿದೆ.

ರಾಜ್ಯದಲ್ಲಿ ಪದವೀಧರ ಕ್ಷೇತ್ರಕ್ಕೆ ಹಾಗೂ ಶಿಕ್ಷಕರ ಕ್ಷೇತ್ರಕ್ಕೆ ತಲಾ ಇಬ್ಬರು ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. 

ಪದವೀಧರರ ಕ್ಷೇತ್ರಗಳಿಗೆ ಚಿದಾನಂದ್ ಎಂ ಗೌಡ ಮತ್ತು ಎಸ್ ವಿ ಸ<ಕನೂರು, ಶಿಕ್ಷಕರ ಕ್ಷೇತ್ರಗಳಿಗೆ ಶಶೀಲ್  ಜಿ. ನಮೋಶಿ ಹಾಗೂ ಪುಟ್ಟಣ್ಣ ಅವರ ಹೆಸರುಗಳು ಫೈನಲ್ ಆಗಿದೆ.

ಅದೇ ರೀತಿಯಲ್ಲಿ ಬಿಹಾರದಲ್ಲಿ ಬಿಜೆಪಿ ವು ಶಿಕ್ಷಕರ ಕ್ಷೇತ್ರಗಳಿಗೆ ನಾಲ್ಕು ಮತ್ತು ಪದವೀಧರ ಕ್ಷೇತ್ರಕ್ಕೆ ಓರ್ವ ಅಭ್ಯರ್ಥಿಯ ಹೆಸರನ್ನು ಘೋಷಿಸಿದೆ.

SCROLL FOR NEXT