ರಾಜಕೀಯ

ಶಿರಾ ಉಪಚುನಾವಣೆ: ಕಾಂಗ್ರೆಸ್ ಮಾಜಿ ಸಂಸದರ ಪುತ್ರ ಬಿಜೆಪಿಗೆ ಸೇರ್ಪಡೆ

Manjula VN

ಬೆಂಗಳೂರು: ಶಿರಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಸಂಭವನೀಯ ಅಭ್ಯರ್ಥಿಗಳ ಪೈಕಿ ಒಬ್ಬರಾಗಿರುವ ಕಾಂಗ್ರೆಸ್ ಮಾಜಿ ಸಂಸದ ಸಿಪಿ ಮೂಡಲಗಿರಿಯಪ್ಪ ಅವರ ಪುತ್ರ ಡಾ.ರಾಜೇಶ್ ಗೌಡ ಅವರು ಶನಿವಾರ ಬಿಜೆಪಿ ಪಕ್ಷಕ್ಕೆ ಅಧಿಕೃತವಾದಿ ಸೇರ್ಪಡೆಗೊಂಡರು. 

ಶಿರಾ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಡಾ.ಸಿ.ಎಂ.ರಾಜೇಶ್ ಗೌಡ ಅವರನ್ನು ಮಲ್ಲೇಶ್ವರದ ಬಿಜೆಪಿ ಕರೇಚಿಯಲ್ಲಿ ಪಕ್ಷದ ಧ್ವಜ ನೀಡಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅವರು ಸ್ವಾಗತಿಸಿದರು. 

ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ನಡೆಯುತ್ತಿರುವ ಎರಡು ಕ್ಷೇತ್ರದ ಉಪ ಚುನಾವಣೆ ಮತ್ತು ಮೇಲ್ಮನೆಯ ನಾಲ್ಕು ಸ್ಥಾನಗಳ ಚುನಾವಣೆಯಲ್ಲಿ ಬಿಜೆಪಿ ಗೆಲವು ಸಾಧಿಸಲಿದೆ. ಉಪ ಚುನಾವಣೆ ನಡೆಯುವ ಆರ್.ಆರ್.ನಗರ ಮತ್ತು ಶಿರಾ ಕ್ಷೇತ್ರದಲ್ಲಿ ಬಿಜೆಪಿ ಗೆಲವು ಸಾಧಿಸುವುದು ಶತ ಸಿದ್ಧ. ನರೇಂದ್ರ ಮೋದಿಯವರು ಪ್ರದಾನಿಯಾದ ಬಳಿಕ ಯುವಕರು ರಾಜಕೀಯದತ್ತ ಆಕರ್ಷಿತರಾಗುತ್ತಿದ್ದಾರೆ. ಭಾರತವು ವಿಶ್ವಗುರು ಆಗುವತ್ತ ಮುನ್ನಡೆಯುತ್ತಿದೆ. ಏಕಾಂಗಿ ಎನಿಸಿಕೊಂಡಿದ್ದ ಬಿಜೆಪಿ ಇದೀಗ 12 ಕೋಟಿ ಸದಸ್ಯರನ್ನು ಹೊಂದಿ ವಿಶ್ದದ ಅತೀ ದೊಡ್ಡ ರಾಜಕೀಯ ಸಂಘಟನೆಯಾಗಿದೆ ಎಂದು ಹೇಳಿದ್ದಾರೆ. 

ಶಿರಾದಲ್ಲಿ ರಾಜೇಶ್ ಗೌಡ ಪರಿಚಿತ ಮುಖವಾಗಿದ್ದು, ಬಲವಾದ ರಾಜಕೀಯ ಹಿನ್ನಲೆಯಲನ್ನು ಹೊಂದಿರುವವರಾಗಿದ್ದಾರೆ. ಮತದಾರರೊಂದಿಗೂ ಉತ್ತಮ ಸಂಬಂಧವನ್ನು ಹೊಂದಿದ್ದಾರೆ. ಲಾಕ್ಡೌನ್ ಸಮಯದಲ್ಲಿ ಸಾಕಷ್ಟು ಕೆಲಸವನ್ನೂ ಮಾಡಿದ್ದಾರೆ. 

SCROLL FOR NEXT