ರಾಜಕೀಯ

ಸಂಪುಟ ಪುನಾರಚನೆ ಕುರಿತು ಪಕ್ಷದ ನಿರ್ಧಾರದಂತೆ ನಡೆಯುತ್ತೇವೆ: ರಮೇಶ್ ಜಾರಕಿಹೊಳಿ

Manjula VN

ಬೆಳಗಾವಿ: ಶಾಸಕರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸಿಕೊಳ್ಳುವ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರು ಹೇಳಿದ್ದಾರೆ. 

ಹೊಸ ಮುಖಗಳಿಗೆ ದಾರಿ ಮಾಡಿಕೊಡುವ ಸಲುವಾಗಿ ಸಂಪುಟದ ಕೆಲವು ಮಂತ್ರಿಗಳನ್ನು, ವಿಶೇಷವಾಗಿ ಬೆಳಗಾವಿ ಜಿಲ್ಲೆಯ ಸಚಿವರನ್ನು ಕೈಬಿಡಬಹುದು ಎಂಬ ವರದಿಗಳ ಹಿನ್ನೆಲೆಯಲ್ಲಿ ಚಿಕ್ಕೋಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬೆಳಗಾವಿ ಜಿಲ್ಲೆಯ ಯಾವುದೇ ಸಚಿವರ ಕೈಬಿಟ್ಟರೂ ಕೂಡ ಇದಕ್ಕೆ ಯಾವುದೇ ಆಕ್ಷೇಪವಿಲ್ಲ ಎಂದು ಹೇಳಿದ್ದಾರೆ. 

ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಕುರಿತು ಪಕ್ಷದ ನಾಯಕತ್ವ ಯಾವುದೇ ನಿರ್ಧಾರ ಕೈಗೊಂಡರೂ ಅದಕ್ಕೆ ಬದ್ಧರಾಗಿದ್ದೇವೆ ಎಂದು ತಿಳಿಸಿದ್ದಾರೆ. 

ಪಕ್ಷದಲ್ಲಿ ಸಂಭವಿಸಲಿರುವ ಬಿರುಕುಗಳನ್ನು ತಪ್ಪಿಸಲು ಪಕ್ಷದ ನಾಯಕತ್ವವು ಈ ಬಾರಿ ಕೆಲ ನಾಯಕರಿಗೆ ಅವಕಾಶ ಕಲ್ಪಿಸಲು ಪಕ್ಷದ ನಾಯಕತ್ವ ನಿರ್ಧಾರ ಕೈಗೊಳ್ಳಲಿದೆ ಎಂಬ ವಿಶ್ವಾಸವಿದೆ ಎಂದು ಜಾರಕಿಹೊಳಿಯವರು ಹೇಳಿದ್ದಾರೆ. 

ಕೆಲ ದಿನಗಳ ಹಿಂದಷ್ಟೇ ಜಾರಕಿಹೊಳಿಯವರು ದೆಹಲಿಗೆ ಭೇಟಿ ನೀಡಿ ಬಿಜೆಪಿ ಉನ್ನತ ನಾಯಕರನ್ನು ಭೇಟಿ ಮಾಡಿ, ಮಾತುಕತೆ ನಡೆಸಿದ್ದರು. ಮೂಲಗಳ ಪ್ರಕಾರ, ಸಿ ಪಿ ಯೋಗೇಶ್ವರನನ್ನು ಉಪಮುಖ್ಯಮಂತ್ರಿಯನ್ನಾಗಿಸಲು ಎಚ್ ವಿಶ್ವನಾಥ್ ಮತ್ತು ಆರ್ ಶಂಕರ್ ಸೇರಿದಂತೆ ಇತರ ಕೆಲವು ಶಾಸಕರನ್ನು ಸಂಪುಟಕ್ಕೆ ಸೇರ್ಪಡೆಗೊಳ್ಳುವಂತೆ ಮಾಡಲು ಲಾಬಿ ನಡೆದಿದೆ ಎಂದು ಹೇಳಲಾಗುತ್ತಿದೆ. 

SCROLL FOR NEXT