ಎಚ್, ಕುಸುಮಾ 
ರಾಜಕೀಯ

ಕುಸುಮಾ ಮೂಲಕ ಒಕ್ಕಲಿಗರ ಮತಕ್ಕೆ ಗಾಳ ಹಾಕಲು ಕಾಂಗ್ರೆಸ್ ತಂತ್ರ!

ರಾಜರಾಜೇಶ್ವರಿನಗರದ ಅಭ್ಯರ್ಥಿ ಎಚ್ ಕುಸುಮಾ ಜೆಡಿಎಸ್ ಮುಖಂಡ ಹನುಮಂತರಾಯಪ್ಪ ಅವರ ಪುತ್ರಿ. ಹನುಮಂತರಾಯಪ್ಪ ಒಕ್ಕಲಿಗರ ಪ್ರಮುಖ ಮುಖಂಡನಾಗಿ ಗುರುತಿಸಿಕೊಂಡಿದ್ದಾರೆ. ರಾಜಕೀಯಕ್ಕೆ ಹೊಸಬರಾಗಿರುವ ಕುಸುಮಾರ ದಿವಂಗತ ಐಎಎಸ್ ಅಧಿಕಾರಿ ಡಿಕೆ ರವಿ ಅವರ ಪತ್ನಿ.

ಬೆಂಗಳೂರು: ರಾಜರಾಜೇಶ್ವರಿನಗರದ ಅಭ್ಯರ್ಥಿ ಎಚ್ ಕುಸುಮಾ ಜೆಡಿಎಸ್ ಮುಖಂಡ ಹನುಮಂತರಾಯಪ್ಪ ಅವರ ಪುತ್ರಿ.

ಹನುಮಂತರಾಯಪ್ಪ ಒಕ್ಕಲಿಗರ ಪ್ರಮುಖ ಮುಖಂಡನಾಗಿ ಗುರುತಿಸಿಕೊಂಡಿದ್ದಾರೆ. ರಾಜಕೀಯಕ್ಕೆ ಹೊಸಬರಾಗಿರುವ ಕುಸುಮಾರ ದಿವಂಗತ ಐಎಎಸ್ ಅಧಿಕಾರಿ ಡಿಕೆ ರವಿ ಅವರ ಪತ್ನಿ. ಅಮೆರಿಕಾದಲ್ಲಿ ಎಂಜಿನಿಯರಿಂಗ್ ಪದವಿ ಪಡೆದಿರುವ ಕುಸುಮಾ ಬೆಂಗಳೂರಿನ ಖಾಸಗಿ ಎಂಜಿನೀಯರಿಂಗ್ ಕಾಲೇಜಿನಲ್ಲಿ ಸಹಾಯಕ ಪ್ರಾದ್ಯಾಪಕಿಯಾಗಿ ಕೆಲಸ ಮಾಡುತ್ತಿದ್ದಾರೆ. 

ಒಕ್ಕಲಿಗರ ಮತಗಳನ್ನು ಸೆಳೆಯಲು ಕುಸುಮಾ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧಿಸಿತು, ಆರ್ ಆರ್ ನಗರ ಕ್ಷೇತ್ರದಲ್ಲಿ ಶೇ,25 ರಷ್ಟು ಒಕ್ಕಲಿಗ ಮತದಾರರಿದ್ದಾರೆ, 25ಸಾವಿರ ಮುಸ್ಲಿಮರಿದ್ದಾರೆ.

2018 ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ 1.08 ಲಕ್ಷ ಮತಗಳಿಸಿದ್ದರಪ. ಬಿಜೆಪಿಯ ಮುನಿರಾಜು ಗೌಡ 82 ಸಾವಿರ ಮತ್ತು ಜೆಡಿಎಸ್ ನ ಜಿ ಎಚ್ ರಾಮಚಂದ್ರ 60 ಸಾವಿರ  ಮತ ಪಡೆದಿದ್ದರು.

ಸದ್ಯ ಮುನಿರತ್ನ ಬಿಜೆಪಿಯಲ್ಲಿದ್ದು, ಆರ್ ಆರ್ ನಗರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ನೇರ ಫೈಟ್ ಎಂದು ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel