ಡಿಕೆಶಿ-ಎಚ್ ಡಿಕೆ 
ರಾಜಕೀಯ

ಡಿಕೆಶಿ ಒಕ್ಕಲಿಗ ಜಾತಿಯನ್ನು ಗುತ್ತಿಗೆ ತೆಗೆದುಕೊಂಡಿದ್ದಾರೆಯೇ?: ಹೆಚ್‌ಡಿಕೆ ಗರಂ

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಒಕ್ಕಲಿಗ ಜಾತಿಯನ್ನು ಗುತ್ತಿಗೆ ತೆಗೆದುಕೊಂಡಿದ್ದಾರೆಯೇ?. ಇವರೇನು ಜಾತಿ ರಕ್ಷಕರೇ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಒಕ್ಕಲಿಗ ಜಾತಿಯನ್ನು ಗುತ್ತಿಗೆ ತೆಗೆದುಕೊಂಡಿದ್ದಾರೆಯೇ?. ಇವರೇನು ಜಾತಿ ರಕ್ಷಕರೇ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಒಕ್ಕಲಿಗ ನಾಯಕತ್ವ ಪ್ರಭಾವ ಬೀರಿ ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಪ್ರಯತ್ನಿಸುತ್ತಿರುವುದಕ್ಕೆ ನಗರದಲ್ಲಿಂದು ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಕ್ಷೇತ್ರದಲ್ಲಿ ಶಿವಕುಮಾರ್ ಜಾತಿರಾಜಕಾರಣ ಆರಂಭಿಸಿದ್ದಾರೆ. ಹಿಂದೆ ಜಾತಿ ಮೇಲೆ ದಬ್ಬಾಳಿಕೆಯಾದಾಗ ಏಕೆ ಕ್ರಮ ತೆಗೆದುಕೊಳ್ಳಲಿಲ್ಲ. ಈಗ ಜಾತಿಯವರೆಲ್ಲ ಒಂದಾಗಬೇಕು. ನಮ್ಮವರಿಗೆ ತೊಂದರೆ ಕೊಡುತ್ತಾರೆ ಎನ್ನುವುದೆಷ್ಟು  ಸರಿ? ಎಂದು ಮಾರ್ಮಿಕವಾಗಿ ಪ್ರಶ್ನಿಸಿದರು.

ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸುವ ಅಧಿಕಾರಿಗಳನ್ನು ಎತ್ತಂಗಡಿ ಮಾಡಲಾಗುವುದೆಂದು ಹೇಳುತ್ತಿರುವ ಶಿವಕುಮಾರ್‌ಗೆ ಈಗ ಜ್ಞಾನೋದಯವಾದಂತಿದೆ. ಮೊದಲೇ ಇವೆಲ್ಲ ತಿಳಿದಿರಲಿಲ್ಲವೇ?. ಇಂತಹ ವಾತಾವರಣ ಯಾವಾಗ ಸೃಷ್ಟಿಯಾಯಿತು?. ಯಾರು ಬೆಂಬಲ ಕೊಡುತ್ತಾ ಬಂದರು ಎನ್ನುವುದನ್ನು ಹೇಳಬೇಕು. ಚುನಾವಣೆಗಾಗಿ ಈಗ ಮಾತನಾಡುತ್ತಿರುವ ಅವರು ಮುನಿರತ್ನ ಕಾಂಗ್ರೆಸ್‌ನಲ್ಲಿದ್ದಾಗ ಏಕೆ ತಡೆಯುವ ಪ್ರಯತ್ನ ಮಾಡಲಿಲ್ಲ ಎಂದು ಡಿಕೆಶಿಗೆ ತಿರುಗೇಟು ನೀಡಿದರು.

ರಾಜರಾಜೇಶ್ವರಿ ನಗರದಲ್ಲಿ ಮೃತ ಡಿಕೆ ರವಿ ಅವರ ಪತ್ನಿ ಕುಸುಮಾ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಇದರ ಬೆನ್ನಲ್ಲೇ ಗೆಲುವಿಗಾಗಿ ಕಾಂಗ್ರೆಸ್ ರಣತಂತ್ರಗಳನ್ನು ರಚಿಸುತ್ತಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ತುರ್ತು ಕಾರಣ'ಗಳಿಂದಾಗಿ ಎಲ್ಲಾ ಅಧ್ವಾನವಾಯಿತು: ವಿಮಾನಗಳ ರದ್ದತಿ ಕುರಿತು IndiGo ಸ್ಪಷ್ಟನೆ

ಪಶ್ಚಿಮ ಬಂಗಾಳ: 'ಬಾಬರಿ ಮಸೀದಿ' ನಿರ್ಮಾಣದ ಪ್ಲಾನ್, TMC ಶಾಸಕ ಹುಮಾಯೂನ್ ಕಬೀರ್ ಅಮಾನತು, ಹೊಸ ಪಕ್ಷ ರಚನೆಯ ಘೋಷಣೆ!

ಕೆಂಪೇಗೌಡ ಏರ್ ಪೋರ್ಟ್ ಲ್ಲಿ 62 ವಿಮಾನ ಸೇರಿ 200ಕ್ಕೂ ಹೆಚ್ಚು ಇಂಡಿಗೋ ವಿಮಾನ ಹಾರಾಟ ರದ್ದು; ಕಾರಣವೇನು?: ತನಿಖೆ ಆರಂಭಿಸಿದ DGCA

ಸಂಚಾರಿ ಸಾಥಿ ಆ್ಯಪ್: ಮೋದಿ ಸರ್ಕಾರ 'ಯೂ ಟರ್ನ್', ಮಧ್ಯಮ ವರ್ಗದ ಜನರಿಗೆ ಸಿಕ್ಕ ಅಪರೂಪದ ಜಯ! ಹೇಗೆ?

ಎಲ್ಗರ್ ಪರಿಷತ್ ಪ್ರಕರಣ: 5 ವರ್ಷಗಳ ನಂತರ DU ಮಾಜಿ ಪ್ರಾಧ್ಯಾಪಕ ಹನಿ ಬಾಬುಗೆ ಜಾಮೀನು

SCROLL FOR NEXT