ರಣದೀಪ್ ಸಿಂಗ್ ಸುರ್ಜೇವಾ 
ರಾಜಕೀಯ

ಕಾಯ್ದೆ ದುರ್ಬಲಗೊಳಿಸಿ ರೈತರಿಗೆ ಮರಣಶಾಸನ ಬರೆಯಲು ಹೊರಟ ಕೇಂದ್ರ ಸರ್ಕಾರ: ಸುರ್ಜೇವಾಲ ಟೀಕಾಪ್ರಹಾರ

ಕೇಂದ್ರದ ಬಿಜೆಪಿ ನೇತೃತ್ವದ ಪ್ರಧಾನಿ ನರೇಂದ್ರಮೋದಿ ಸರ್ಕಾರ ಕೃಷಿ ಸಂಬಂಧಿತ ಕಾಯ್ದೆಗಳ ಮೂಲ ಸ್ವರೂಪವನ್ನೇ ತಿದ್ದುಪಡಿ ಮಾಡುವ ಮೂಲಕ ಅಂಬಾನಿ-ಅದಾನಿಗಳಿಗೆ ಅನುಕೂಲ ಮಾಡಿ ರೈತರಿಗೆ ಮರಣ ಶಾಸನ ಬರೆಯಲು ಮುಂದಾಗಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಆರೋಪಿಸಿದ್ದಾರೆ.

ಮಂಡ್ಯ:  ಕೇಂದ್ರದ ಬಿಜೆಪಿ ನೇತೃತ್ವದ ಪ್ರಧಾನಿ ನರೇಂದ್ರಮೋದಿ ಸರ್ಕಾರ ಕೃಷಿ ಸಂಬಂಧಿತ ಕಾಯ್ದೆಗಳ ಮೂಲ ಸ್ವರೂಪವನ್ನೇ ತಿದ್ದುಪಡಿ ಮಾಡುವ ಮೂಲಕ ಅಂಬಾನಿ-ಅದಾನಿಗಳಿಗೆ ಅನುಕೂಲ ಮಾಡಿ ರೈತರಿಗೆ ಮರಣ ಶಾಸನ ಬರೆಯಲು ಮುಂದಾಗಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಆರೋಪಿಸಿದ್ದಾರೆ.

ಮಂಡ್ಯದ ಅಂಬೇಡ್ಕರ್ ಭವನದಲ್ಲಿ ನಡೆದ ರೈತ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 2014ರಲ್ಲಿ ಕೇಂದ್ರದಲ್ಲಿ ಯುಪಿಎ ಸರ್ಕಾರ ಇದ್ದಾಗ ರೈತರ ಭೂಸ್ವಾಧೀನ ಕಾಯ್ದೆ ರೈತರಿಗೆ ಭದ್ರತೆ ಒದಗಿಸಿತ್ತು. ಆದರೆ ನಂತರ ಬಂದ ಮೋದಿ ಸರ್ಕಾರ ರೈತರ ಈ ಹಕ್ಕುಗಳನ್ನು ಮೊಟಕುಗೊಳಿಸಿ ಅವರನ್ನು ದುರ್ಬಲ ಮಾಡಲು ಹೊರಟಿದೆ ಎಂದು ಕಿಡಿಕಾರಿದರು.

ಕನಿಷ್ಠ ಬೆಂಬಲ ಬೆಲೆ ಕೂಡ ರದ್ದು ಮಾಡಲು ಕೇಂದ್ರ ಸರ್ಕಾರ ಹೊರಟಿದೆ. ಆ ಮೂಲಕ ಕೈಗಾರೀಕರಣ ಮತ್ತು ಖಾಸಗೀಕರಣಕ್ಕೆ ಕೆಂಪು ಹಾಸು ಹಾಸಿದೆ. ಇದನ್ನು ಪ್ರತಿಯೊಬ್ಬರೂ ವಿರೋಧಿಸಬೇಕಿದೆ ಎಂದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ