ರಾಜಕೀಯ

ಎದುರಾಳಿಯನ್ನು ಎಂದಿಗೂ ಪ್ರಬಲ ಎಂದೇ ಭಾವಿಸಬೇಕು: ಬಿ.ಸಿ.ಪಾಟೀಲ್

Lingaraj Badiger

ಹಾವೇರಿ: ಯುದ್ಧದಲ್ಲಿ ನಮ್ಮ ಎದುರಾಳಿ ಎಷ್ಟೇ ದುರ್ಬಲವಾಗಿದ್ದರೂ ಮೈಮರೆತು ಕೂರದೇ ಪ್ರಬಲವಾಗಿಯೇ ಇದ್ದಾನೆ ಎಂದು ಭಾವಿಸಿ ಕಣದಲ್ಲಿ ಹೋರಾಡಲೇಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಕರೆ ನೀಡಿದ್ದಾರೆ.

ವಿಧಾನ ಪರಿಷತ್ತಿಗೆ ಅ.28 ರಂದು ನಡೆಯಲಿರುವ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಗೆ ಬಿಜೆಪಿಯಿಂದ‌ ಸ್ಪರ್ಧಿಸಿರುವ ಎಸ್.ವಿ.ಸಂಕನೂರು ಸೋಮವಾರ ಹಿರೆಕೆರೂರಿಗೆ ಆಗಮಿಸಿದ ಹಿನ್ನಲೆಯಲ್ಲಿ ಪಕ್ಷ ಸಂಘಟನೆ ಹಾಗೂ ಚುನಾವಣಾ ಪ್ರಚಾರ ಕುರಿತು ಬಿ.ಸಿ.ಪಾಟೀಲರ ನೇತೃತ್ವದಲ್ಲಿ ನಡೆದ ಚುನಾವಣಾ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಈ ಕಿವಿ ಮಾತು ಹೇಳಿದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಬಿ.ಸಿ.ಪಾಟೀಲ್, ಪಶ್ಚಿಮ ಪದವೀಧರ ಕ್ಷೇತ್ರದ ನಾಲ್ಕು ಜಿಲ್ಲೆಗಳಲ್ಲಿ ಬಿಜೆಪಿಯ 23 ಶಾಸಕರು, ಐವರು ಮಂತ್ರಿಗಳು, ನಾಲ್ವರು ಸಂಸದರಿದ್ದು, ಪಶ್ಚಿಮ ಪದವೀಧರ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿದೆ. ಹೀಗಿದ್ದಾಗ್ಯೂ ಸಹ ಎದುರಾಳಿಯನ್ನು ಹಗುರವಾಗಿ ಯಾರೂ ಪರಿಗಣಿಸದೇ, ಗೆಲುವು ಸುಲಭ ಎಂದು ಪರಿಗಣಿಸದೇ ಹೊಸ ಚುನಾವಣೆ ಎಂದು ಅಷ್ಟೇ ಹುಮ್ಮಸ್ಸಿನಿಂದ ಮನೆಮನೆಗೆ ಹೋಗಿ ಪಕ್ಷದ ಪರ ಪ್ರಚಾರ ಮಾಡಬೇಕು ಎಂದರು.

ಶಿಕ್ಷಣ ಸಂಸ್ಥೆಗಳ ಮುಖಂಡರು, ಶಿಕ್ಷಕರ ಸಂಘದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರತಿಯೊಬ್ಬರು ದುಡಿಯಬೇಕು. ಗ್ರಾಮ‌ ಪಂಚಾಯತ್ ನಿಂದ ಹಿಡಿದು ಶಾಸಕರವರೆಗೆ ಎಲ್ಲರೂ ಅನುಭವಿಗಳೆ ಇರುವುದರಿಂದ ಈ ಚುನಾವಣೆಯನ್ನು ಗೆಲ್ಲಲೇಬೇಕು. ಸಂಕನೂರು ಕ್ಷೇತ್ರದಲ್ಲಿ ಜಯಗಳಿಸಲೇಬೇಕೆಂದು ಚುನಾವಣಾ ನೀತಿ ರೂಪಿಸಬೇಕು ಎಂದು ಕರೆ ನೀಡಿದರು.

SCROLL FOR NEXT