ರಾಜಕೀಯ

ಬೆಂಗಳೂರು ಆಸ್ತಿ ತೆರಿಗೆ ಹೆಚ್ಚಳ ಮಾಡದಿರಿ: ಸರ್ಕಾರಕ್ಕೆ ಕಾಂಗ್ರೆಸ್ ಆಗ್ರಹ

Manjula VN

ಬೆಂಗಳೂರು: ಕೊರೋನಾದಿಂದಾಗಿ ಜನರು ಸಂಕಷ್ಟದಲ್ಲಿರುವ ಹಿನ್ನೆಲೆಯಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿತೆರಿಗೆ ಹೆಚ್ಚಳದ ಹೊರೆ ಹೊರಿಸುವ ಬದಲು ಹಾಲಿ ತೆರಿಗೆಯನ್ನೇ ಕಡಿಮೆ ಮಾಡಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಬಿಬಿಎಂಪಿ ಪ್ರಸ್ತಾಪಿಸಿರುವ ಆಸ್ತಿ ತೆರಿಗೆ ಹೆಚ್ಚಳವನ್ನು ಜಾರಿಗೆ ತಂದಿದ್ದೇ ಆದರೆ, ಬೆಂಗಳೂರು ನಗರದ ಅಭಿವೃದ್ಧಿಯನ್ನು ನಾಶ ಮಾಡುತ್ತದೆ ಎಂದು ಹೇಳಿದ್ದಾರೆ. 

ಆಸ್ತಿ ತೆರಿಗೆ ಹೆಚ್ಚಳ ಮಾಡಿದರೆ ಬಾಡಿಗೆ ದರ ಹೆಚ್ಚಾಗುತ್ತದೆ, ಇದರಿಂದ ಮನೆ ಹಾಗೂ ಅಂಗಡಿಗಳ ಬಾಡಿಗೆ ದರ ಹೆಚ್ಚಳವಾಗಿ ಸಾರ್ವಜನಿಕರು, ವ್ಯಾಪಾರಿಗಳು ಸಮಸ್ಯೆ ಎದುರಿಸವಂತಾಗುತ್ತದೆ. ಆಸ್ತಿ ತೆರಿಗೆ ಕಡಿಮೆ ಮಾಡಿದರೆ ಬಾಡಿಗೆ ದರಗಳು ಕಡಿಮೆಯಾಗಿ ಬಡವರು ಹಾಗೂ ಮಧ್ಯಮ ವರ್ಗದವರಿಗೆ ಮನೆಗಳು ಕೈಗೆಟಕುವಂತಾಗುತ್ತದೆ ಎಂದು ತಿಳಿಸಿದ್ದಾರೆ. 

SCROLL FOR NEXT