ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ 
ರಾಜಕೀಯ

ಕುಸುಮಾ ವಿರುದ್ಧ ಎಫ್ ಐಆರ್ ಹೇಡಿತನ, ನೀಚತನದ ರಾಜಕಾರಣ: ಡಿಕೆಶಿ ಕೆಂಡಾಮಂಡಲ

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಬೆಂಗಾವಲು ಪಡೆಯ ಸಿಬ್ಬಂದಿ ವಿರುದ್ಧ ಪೊಲೀಸ್ ಅಧಿಕಾರಿಗಳು ಎಫ್‌ಐಆರ್‌ ದಾಖಲಿಸಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಬೆಂಗಾವಲು ಪಡೆಯ ಸಿಬ್ಬಂದಿ ವಿರುದ್ಧ ಪೊಲೀಸ್ ಅಧಿಕಾರಿಗಳು ಎಫ್‌ಐಆರ್‌ ದಾಖಲಿಸಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸದಾಶಿವ ನಗರದ ನಿವಾಸದಲ್ಲಿ ಇಂದು ತುರ್ತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಆರ್‌ಆರ್‌ ನಗರದ ನಮ್ಮ ಪಕ್ಷದ ಅಭ್ಯರ್ಥಿ ಕುಸುಮಾ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಿರುವುದು ಹೇಡಿತನ, ನೀಚತನದ ರಾಜಕಾರಣವಾಗಿದೆ.ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯವನ್ನು ನಾವು ಸಹಿಸುವುದಿಲ್ಲ ಎಂದರು.

ಈಗಾಗಲೇ  ಸಾಕಷ್ಟು ನೊಂದು ಬೆಂದಿರುವ ಹೆಣ್ಣು ಮಗಳನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದೇವೆ.ರಾಜಕಾರಣದಲ್ಲಿ ಕಣ್ಣು ಬಿಡುತ್ತಿರುವ ಅಭ್ಯರ್ಥಿ ಮೇಲೆ ಎಫ್‌ಐಆರ್‌ ದಾಖಲಿಸಿ ಪೊಲೀಸರು ಹಾಗೂ ಸರ್ಕಾರ ಅಧಿಕಾರದ ದುರ್ಬಳಕೆ ಮಾಡಿಕೊಂಡಿದೆ.ಇಂತಹ ನೀಚ ರಾಜಕಾರಣವನ್ನು ನಾನೆಂದೂ ನೋಡಿಲ್ಲ.ಇದಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಕಿಡಿಕಾರಿದರು.

ಈ ಬಗ್ಗೆ ಮುಖ್ಯಮಂತ್ರಿ  ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿರುವ ಡಿಕೆಶಿ, ಎಫ್ಐಆರ್ ಪ್ರಕರಣದ ಬಗ್ಗೆ ಕಾನೂನಾತ್ಮಕವಾಗಿ ಹಾಗೂ ಚುನಾವಣಾ ಆಯೋಗಕ್ಕೂ ದೂರು ನೀಡಲಿದ್ದೇವೆ ಎಂದು  ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್