ಡಿಕೆ ಶಿವಕುಮಾರ್ 
ರಾಜಕೀಯ

ಆರ್ ಆರ್ ನಗರದ 200ಕ್ಕೂ ಅಧಿಕ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

ದೇಶ ಹಾಗೂ ರಾಜ್ಯಗಳನ್ನು ಆಳಿದ ಬಹುತೇಕ ಮಹನೀಯರು ಕಾಂಗ್ರೆಸ್ ಪಕ್ಷದಿಂದಲೇ ತಮ್ಮ ನಾಯಕತ್ವ ಬೆಳೆಸಿಕೊಂಡಿದ್ದಾರೆ.

ಬೆಂಗಳೂರು: ದೇಶ ಹಾಗೂ ರಾಜ್ಯಗಳನ್ನು ಆಳಿದ ಬಹುತೇಕ ಮಹನೀಯರು ಕಾಂಗ್ರೆಸ್ ಪಕ್ಷದಿಂದಲೇ ತಮ್ಮ ನಾಯಕತ್ವ ಬೆಳೆಸಿಕೊಂಡಿದ್ದಾರೆ. ಈ ದೊಡ್ಡ ಇತಿಹಾಸ ಇರುವ ಪಕ್ಷದ ಧ್ವಜ ಧರಿಸುವುದೇ ಒಂದು ಮಹಾಭಾಗ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 200ಕ್ಕೂ ಹೆಚ್ಚು ಜನತಾದಳದ ಮುಖಂಡರನ್ನು ಕಾಂಗ್ರೆಸ್ ಗೆ ಬರಮಾಡಿಕೊಂಡ ಬಳಿಕ ಅವರು ಮಾತನಾಡಿದರು.

ಇವತ್ತು ರಾಜರಾಜೇಶ್ವರಿ ನಗರ ಕ್ಷೇತ್ರದ ಪಾಲಿಗೆ ಬಹಳ ಐತಿಹಾಸಿಕ ದಿನ. ಕಳೆದ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ 60 ಸಾವಿರ ಮತಗಳನ್ನು ಪಡೆದಿದ್ದರು. ಈ ಕ್ಷೇತ್ರದ ರಾಜಕಾರಣ, ರಾಜ್ಯದ ರಾಜಕಾರಣ, ಪಕ್ಷದ ನಾಯಕತ್ವ, ಕಾಂಗ್ರೆಸ್ ಕಾರ್ಯಕ್ರಮಗಳನ್ನು ಗಮನದಲ್ಲಿಟ್ಟುಕೊಂಡು ಆ ಪಕ್ಷದ ಮುಖಂಡರು ಯಾವ ಷರತ್ತೂ ಇಲ್ಲದೆ, ದೊಡ್ಡ ಇತಿಹಾಸವಿರುವ ರಾಷ್ಟ್ರೀಯ ಪಕ್ಷದಲ್ಲಿ ಗುರುತಿಸಿಕೊಳ್ಳಲು ಇಚ್ಛೆಪಟ್ಟು ಆಗಮಿಸಿದ್ದಾರೆ ಎಂದರು.

ಕ್ಷೇತ್ರದ ಟಿಕೆಟ್​ ಕೈ ತಪ್ಪಿದ ಹಿನ್ನಲೆಯಲ್ಲಿ ಆರ್​ಆರ್​ ನಗರ ಕ್ಷೇತ್ರದ ಜೆಡಿಎಸ್​​ ಅಧ್ಯಕ್ಷ ಬೆಟ್ಟಸ್ವಾಮಿ ಗೌಡ ಕೆಪಿಸಿಸಿ ಅಧ್ಯಕ್ಷರ ಸಮ್ಮುಖದಲ್ಲಿ ಇಂದು ಕಾಂಗ್ರೆಸ್​ ಸೇರಿದ್ದಾರೆ. ಅವರ ಜೊತೆಗೆ 200ಕ್ಕೂ ಹೆಚ್ಚು ಕಾರ್ಯಕರ್ತರು ಹಾಗೂ ಮುಖಂಡರು ಕಾಂಗ್ರೆಸ್​ ಸೇರ್ಪಡಗೊಂಡಿದ್ದಾರೆ. ಈ ವೇಳೆ ಸಂಸದ ಡಿಕೆ ಸುರೇಶ್​ ಕೂಡ ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT