ಯಡಿಯೂರಪ್ಪ 
ರಾಜಕೀಯ

ಏಳು ತಿಂಗಳ ನಂತರ ಶಿಕಾರಿಪುರಕ್ಕೆ ಸಿಎಂ ಯಡಿಯೂರಪ್ಪ ಭೇಟಿ

ಸತತ ಏಳು ತಿಂಗಳ ನಂತರ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತವರೂರು ಶಿಕಾರಿಪುರಕ್ಕೆ ಭಾನುವಾರ ಪ್ರಯಾಣ ಬೆಳೆಸಲಿದ್ದಾರೆ.

ಬೆಂಗಳೂರು: ಸತತ ಏಳು ತಿಂಗಳ ನಂತರ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತವರೂರು ಶಿಕಾರಿಪುರಕ್ಕೆ ಭಾನುವಾರ ಪ್ರಯಾಣ ಬೆಳೆಸಲಿದ್ದಾರೆ.

ಫೆಬ್ರವರಿಯಲ್ಲಿ ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಶಿಕಾರಿಪುರಕ್ಕೆ ತೆರಳಿದ್ದರು, ಅದಾದ ನಂತರ ಲಾಕ್ ಕೊರೋನಾ ಕಾರಣದಿಂದಾಗಿ ತವರಿಗೆ ಹೋಗಿರಲಿಲ್ಲ.

ದಸರಾ ಆರಂಭವಾಗುತ್ತಿದ್ದಂತೆಯೇ ಸಿಎಂ ಅಲ್ಲಿಯೇ ಉಳಿದುಕೊಳ್ಳುವ ಸಾಧ್ಯತೆಯಿದೆ.  ಮೂರು ದಿನಗಳ ಪ್ರವಾಸದಲ್ಲಿ ಸಿಎಂ ಆಪ್ತರು ಮತ್ತು ಕುಟುಂಬಸ್ಥರು ಭಾಗಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.

18ರಂದು ಮಧ್ಯಾಹ್ನ ಬೆಂಗಳೂರಿನಿಂದ ಹೊರಡುವ ಮುಖ್ಯಮಂತ್ರಿ ಸಂಜೆ 4ಕ್ಕೆ ಶಿಕಾರಿಪುರ ಹೆಲಿಪ್ಯಾಡ್‌ಗೆ ತಲುಪುವರು. ನಂತರ ತಮ್ಮ ಮನೆಯಲ್ಲೇ ತಂಗುವರು. 19ರಂದು 11ಕ್ಕೆ ಕಲ್ಲುವಡ್ಡು ಏತನೀರಾವರಿ ಯೋಜನೆಗೆ ಶಂಕು ಸ್ಥಾಪನೆ ನೆರವೇರಿಸುವರು. ಉಡುತಡಿ ಅಕ್ಕಮಹಾದೇವಿ ಜನ್ಮಸ್ಥಳದ ಅಭಿವೃದ್ಧಿ ಕಾಮಗಾರಿ ವೀಕ್ಷಿಸುವರು.

20ರಂದು ಬೆಳಿಗ್ಗೆ 10ಕ್ಕೆ ಸಾಂಸ್ಕೃತಿಕ ಭವನದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಸವಲತ್ತು ವಿತರಿಸುವರು. ಅಂದು ಮಧ್ಯಾಹ್ನ 2.30ಕ್ಕೆ ಹೆಲಿಕಾಪ್ಟರ್ ಮೂಲಕ ಬೆಂಗಳೂರು ತಲುಪಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ಇನ್ನೂ ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಅಕ್ಟೋಬರ್ 19 ಮತ್ತು 20 ರಂದು ಸ್ವಕ್ಷೇತ್ರ ಬಾದಾಮಿ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಹಲವು ಅಭಿವೃದ್ಧಿ ಕಾರ್ಯಕ್ರಮ ಮತ್ತು ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೋಳ್ಳಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!