ರಾಜಕೀಯ

ರಾಜರಾಜೇಶ್ವರಿ ನಗರದಲ್ಲಿ 40,000 ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದೇವೆ: ಸೋಮಶೇಖರ್

Manjula VN

ಮೈಸೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ 40,000 ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದೆ ಎಂದು ಸಚಿವ ಎಸ್'ಟಿ ಸೋಮಶೇಖರ್ ಅವರು ಶುಕ್ರವಾರ ಹೇಳಿದ್ದಾರೆ. 

ಕಳೆದ ಬಾರಿ ನಡೆದ ಸಾರ್ವತ್ರಿಕ ಚುನಾವಣೆ ವೇಳೆ ಚುನಾವಣಾ ಆಯೋಗ ನಮ್ಮ ಪಕ್ಷದ ಅಭ್ಯರ್ಥಿಯಾಗಿದ್ದ ಮುನಿರತ್ನ ಅವರ ವಿರುದ್ಧ ಪ್ರಕಱಣ ದಾಖಲಿಸಿಕೊಂಡಿತ್ತು. ಈ ಹಿಂದೆ ಉಪಚುನಾವಣೆ ನಡೆಸಲು ಸುಪ್ರೀಂಕೋರ್ಟ್ ಹಸಿರುನಿಶಾನೆ ತೋರಿ. ಮುನಿರತ್ನ ನಾಯ್ಡು ಅವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು. ಇದರಂತೆ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಮುನಿರತ್ನ ಅವರಿಗೆ ಬಿಗ್ ರಿಲೀಫ್ ದೊರೆತಂತಾಗಿತ್ತು. 

ಚುನಾವಣೆಯಲ್ಲಿ ಮುನಿರತ್ನ ಅವರು ಸ್ಪರ್ಧಿಸುವುದನ್ನು ತಡೆಯಲು ಎಲ್ಲಾ ಬಾಗಿಲುಗಳು ಮುಚ್ಚಿರುವುದರಿಂದ ಇದೀಗ ಕೆಪಿಸಿಸಿಅಧ್ಯಕ್ಷ ಡಿಕೆ ಶಿವಕುಮಾರ್ ಅವರು, ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಮಾಡಿ ದಾಖಲಾಗಿದ್ದ ಎಫ್ಐಆರ್ ಕುರಿತು ಮಾತನಾಡುತ್ತಿದ್ದಾರೆ. ಆರ್.ಆರ್.ನಗರದಲ್ಲಿ ಡಿಕೆ ಶಿವಕುಮಾರ್ ಅವರು ಗೆಲ್ಲಲು ಸಾಧ್ಯವಿಲ್ಲ. ಹೀಗಾಗಿ ಪಿಳ್ಳೆನೆಪಗಳನ್ನು ಹುಡುಕುತ್ತಿದ್ದಾರೆ. 

ನೀತಿ ಸಂಹಿತೆ ಉಲ್ಲಂಘನೆ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುವುದು ಚುನಾವಣಾ ಆಯೋಗದ ಕೆಲಸ ಎಂಬುದನ್ನು ಕಾಂಗ್ರೆಸ್ ತಿಳಿದುಕೊಳ್ಳಬೇಕಿದೆ ಎಂದು ಸೋಮಶೇಖರ್ ಅವರು ಹೇಳಿದ್ದಾರೆ. 

ಬಿಜೆಪಿ ನಾಯಕರ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ಕೇಳಿ ಬರುತ್ತಿರುವ ಭ್ರಷ್ಟಾಚಾರ ಆರೋಪಗಳು ಉಪಚುನಾವಣೆ ಮೇಲೆ ಪರಿಣಾಮ ಬೀರಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು, ಇದು ವಿಚಾರವಾಗಿದ್ದೇ ಆದರೆ, ಡಿ.ಕೆ.ಶಿವಕುಮಾರ್ ಅವರೂ ಕೂಡ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುವಂತಿಲ್ಲ. ತಮ್ಮ ಕ್ಷೇತ್ರದಲ್ಲಿ ಮುನಿರತ್ನ ಅವರು ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಹೀಗಾಗಿಯೇ ಈ ಬಾರಿಯ ಆರ್.ಆರ್.ನಗರ ಉಪಚುನಾವಣೆಯಲ್ಲಿ ಭಾರೀ ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದೇವೆಂದು ತಿಳಿಸಿದ್ದಾರೆ. 

SCROLL FOR NEXT