ಎಚ್ ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ 
ರಾಜಕೀಯ

ನನ್ನನ್ನು ಕೆಣಕಿದರೆ ಸುಮ್ಮನಿರುವುದಿಲ್ಲ: ಸಿದ್ದರಾಮಯ್ಯಗೆ ಎಚ್ ಡಿಕೆ ಎಚ್ಚರಿಕೆ

ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮ ರಾಜಕೀಯ ತೆವಲಿಗೆ ಪದೇಪದೇ ನನ್ನನ್ನು ಕೆಣಕಿದರೆ ಸುಮ್ಮನಿರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು: ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮ ರಾಜಕೀಯ ತೆವಲಿಗೆ ಪದೇಪದೇ ನನ್ನನ್ನು ಕೆಣಕಿದರೆ ಸುಮ್ಮನಿರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಮೈತ್ರಿ ಸರ್ಕಾರದಲ್ಲಿ ಜಾತಿ ಜನಗಣತಿ ಸಮೀಕ್ಷೆ ಬಿಡುಗಡೆಗೆ ಕುಮಾರಸ್ವಾಮಿ ಅಡ್ಡಗಾಲು ಹಾಕಿದ್ದರು ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದರು. 

ನನ್ನ ಬಗ್ಗೆ ಮಾತನಾಡುವಾಗ ಎಚ್ಚರಿಕೆಯಿಂದರಬೇಕು, ನಿಮ್ಮ ತೆವಲಿಗೆ ಸಮಾಜಗಳನ್ನು ನನ್ನ ವಿರುದ್ಧ ಎತ್ತಿಕಟ್ಟುವ ಪ್ರಯತ್ನ ಮಾಡಬೇಡಿ ಎಂದರು.

ಮೈತ್ರಿ ಸರ್ಕಾರದಲ್ಲಿ ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಸಿದ್ದರಾಮಯ್ಯ ಒಂದು ದಿನವೂ ಕೂಡ ಜಾತಿಗಣತಿ ಸಮೀಕ್ಷೆ ವಿಚಾರ ಚರ್ಚೆಯೇ ಮಾಡಿಲ್ಲ. ಕಾಂಗ್ರೆಸ್ ನ ಮಂತ್ರಿಗಳು ಕೂಡ ಈ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಆದರೆ ಈಗ ನನ್ನ ಹೆಸರು ಹೇಳಿ ಸುಳ್ಳು ಹೇಳುತ್ತಿದ್ದಾರೆಂದು ಕಿಡಿಕಾರಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

ಪಂದ್ಯ ಮುಗಿಸಿ ಮನೆಗೆ ಮರಳುವಾಗ ಭೀಕರ ಅಪಘಾತ, 4 ಕ್ರಿಕೆಟಿಗರ ದಾರುಣ ಸಾವು!

ಮಗು ಆಡಿಸುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ; ರಕ್ಷಣೆಗೆ ಧಾವಿಸಿದ ಮಹಿಳೆ, Video ವೈರಲ್

'ಭಾರತೀಯನ ಮದುವೆಯಾದಾಕ್ಷಣ Indian ಆಗಲ್ಲ, ಬಾಂಗ್ಲಾದೇಶಿ ಪತ್ನಿಗೆ ಭಾರತ ಪ್ರವೇಶ ನಿರಾಕರಣೆ ಸರಿ ಇದೆ': ಹೈಕೋರ್ಟ್