ಮುನಿರತ್ನ 
ರಾಜಕೀಯ

ಆರ್.ಆರ್. ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನರನ್ನು ಅನರ್ಹಗೊಳಿಸಿ: ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

ರಾಜರಾಜೇಶ್ವರಿ ನಗರ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಬೇಕು ಎಂದು ಅಡ್ಡ ದಾರಿ ಹಿಡಿದಿರುವ ಬಿಜೆಪಿ ಅಭ್ಯರ್ಥಿ ಮುನಿರತ್ನ ಮತದಾರರಿಗೆ ಹಣ ನೀಡಿ ಗುರುತಿನ ಚೀಟಿಯನ್ನು ಪಡೆಯುತ್ತಿದ್ದಾರೆ. ಮತದಾರರಿಗೆ ಆಮೀಷ ನೀಡುವ ಮೂಲಕ ಅಕ್ರಮ ಎಸಗುತ್ತಿದ್ದಾರೆ ಎಂದು ಕಾಂಗ್ರೆಸ್​ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಬೆಂಗಳೂರು: ರಾಜರಾಜೇಶ್ವರಿ ನಗರ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಬೇಕು ಎಂದು ಅಡ್ಡ ದಾರಿ ಹಿಡಿದಿರುವ ಬಿಜೆಪಿ ಅಭ್ಯರ್ಥಿ ಮುನಿರತ್ನ ಮತದಾರರಿಗೆ ಹಣ ನೀಡಿ ಗುರುತಿನ ಚೀಟಿಯನ್ನು ಪಡೆಯುತ್ತಿದ್ದಾರೆ. ಮತದಾರರಿಗೆ ಆಮೀಷ ನೀಡುವ ಮೂಲಕ ಅಕ್ರಮ ಎಸಗುತ್ತಿದ್ದಾರೆ ಎಂದು ಕಾಂಗ್ರೆಸ್​ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ನೇತೃತ್ವದ ನಿಯೋಗ ಮಂಗಳವಾರ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಚುನಾವಣೆಗೆ ಮುನಿರತ್ನ ಸ್ಪರ್ಧಿಸದಂತೆ ಅನರ್ಹಗೊಳಿಸಬೇಕು ಎಂದು ದೂರಿನಲ್ಲಿ ಮನವಿ ಮಾಡಲಾಗಿದೆ. ಉಪ ಚುನಾವಣೆ ವೇಳೆ ಮತದಾರರಿಗೆ ಆಮಿಷವನ್ನು ಬಿಜೆಪಿ ಅಭ್ಯರ್ಥಿ ವೊಡ್ಡುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಬಿಜೆಪಿ ಅಭ್ಯರ್ಥಿ ಮುನಿರತ್ನ ಅಕ್ರಮವಾಗಿ ಮತದಾರರ ಗುರುತಿನ ಚೀಟಿಯನ್ನು ಸಂಗ್ರಹ ಮಾಡಿದ್ದಾರೆ. ತಲಾ 5 ಸಾವಿರ ರೂ. ನೀಡಿ ಗುರುತಿನ ಚೀಟಿಯನ್ನು ಸಂಗ್ರಹ ಮಾಡಿದ್ದಾರೆ ಎಂದು ಕಾಂಗ್ರೆಸ್ ಆಯೋಗಕ್ಕೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಮುನಿರತ್ನ ಅವರು ಹಣ ಮತ್ತು ಉಡುಗೊರೆಗಳ ಮೂಲಕ ಮತದಾರರನ್ನು ಸೆಳೆಯಲು ಪ್ರಯತ್ನ ನಡೆಸಿದ್ದಾರೆ. ಆದ್ದರಿಂದ, ಅವರು ಚುನಾವಣೆಯಲ್ಲಿ ಸ್ಪರ್ಧಿಸದಂತೆ ಅನರ್ಹಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ