ಬಸನಗೌಡ ಪಾಟೀಲ್ ಯತ್ನಾಳ್ 
ರಾಜಕೀಯ

ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪಕ್ಷ ಶಿಸ್ತುಕ್ರಮ ಜರುಗಿಸಲಿದೆ: ಸಿ.ಟಿ. ರವಿ

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ  ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ.

ಹುಬ್ಬಳ್ಳಿ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ  ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ ಸಂಕನೂರು ಅವರ ಪರ ಪ್ರಚಾರದಲ್ಲಿ ಕೈಗೊಂಡ ನಂತರ ಮಾತನಾಡಿದ ಅವರು, ಯಡಿಯೂರಪ್ಪ ಅವರು ನಮ್ಮ ನಾಯಕ ಮತ್ತು ಪಕ್ಷವೇ ಅವರನ್ನು ಆಯ್ಕೆ ಮಾಡಿದೆ,  ಸಿಎಂ ವಿರುದ್ಧ ಯತ್ನಾಳ್ ಯಾವುದೇ ಕಾರಣದಿಂದ ಮಾತನಾಡಿರಲಿ, ಅದರ ಬಗ್ಗೆ ನಾನು ಕಾಮೆಂಟ್ ಮಾಡುವುದಿಲ್ಲ ಎಂದು ಹೇಳಿದರು.

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕೋವಿಡ್-19 ಮತ್ತು ಪ್ರವಾಹ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿಭಾಯಿಸಿದೆ,ಕೊರೋನಾ ಕಾರಣದಿಂದಾಗಿ ಸರ್ಕಾರದ ಆರ್ಥಿಕ ಸ್ಥಿತಿ ಸಾಮಾನ್ಯ ಸ್ಥಿತಿಗೆ ಬಂದಿಲ್ಲ ಮತ್ತು ಶಾಸಕರಿಗೆ ತಮ್ಮ ಕ್ಷೇತ್ರಗಳ ಅಭಿವೃದ್ಧಿಗೆ ವಿನಿಯೋಗಿಸಲು ಯಾವುದೇ ಹಣವಿಲ್ಲ ಎಂದು ಹೇಳಿದ್ದಾರೆ.

ಶಾಸಕರು ಅನುದಾನವನ್ನು ನ್ಯಾಯಯುತವಾಗಿ ಬಳಸಿಕೊಳ್ಳಬೇಕು ಎಂದು ಹೇಳಿದ ಅವರು ಎಲ್ಲಾ ಉಪ ಚುನಾವಣೆ ಮತ್ತು ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುತ್ತದೆ ಎಂಬ ವಿಶ್ವಾಸ ವ್ಯಕ್ತ ಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ