ರಾಜಕೀಯ

ಸಿದ್ದರಾಮಯ್ಯನವರು ಕಾಂಗ್ರೆಸ್ ನ ವಿದೂಷಕ, 'ಕಾಡು ಮನುಷ್ಯ' ಪದ ಬಳಕೆ ಶೋಭೆಯಲ್ಲ: ಬಿಜೆಪಿ ತಿರುಗೇಟು

Sumana Upadhyaya

ಬೆಂಗಳೂರು: ಚುನಾವಣೆ ಸಮಯದಲ್ಲಿ ರಾಜಕೀಯ ಪಕ್ಷಗಳ ನಾಯಕರ ಮಧ್ಯೆ ಬಿರುಸಿನ ವಾಗ್ದಾಳಿ ನಡೆಯುವುದು ಸಾಮಾನ್ಯ.

ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ನಡುವಿನ ವಾಕ್ಸಮರ ತಾರಕಕ್ಕೇರಿದೆ.

ಉಪ ಚುನಾವಣೆ ಬಳಿಕ ಹುಲಿಯಾ ಕಾಡಿಗೆ ಹೋಗುತ್ತಾರೆ ಎಂದು ನಳಿನ್ ಕುಮಾರ್ ಕಟೀಲ್ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಪ್ರಚಾರ ಮಾಡುವಾಗ ಹೇಳಿದ್ದರು. ಇದಕ್ಕೆ ಸಿದ್ದರಾಮಯ್ಯನವರು ಸರಣಿ ಟ್ವೀಟ್ ಗಳ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದರು. ನಳಿನ್ ಕುಮಾರ್ ಕಟೀಲ್ ಓರ್ವ ಕಾಡು ಮನುಷ್ಯ, ಪೋಕರಿ, ಆತನನ್ನು ಕರೆದು ಬಿಜೆಪಿ ರಾಜ್ಯಾಧ್ಯಕ್ಷನನ್ನಾಗಿ ಮಾಡಿದ್ದು ಸಂಘ ಪರಿವಾರದವರು, ಬಿಜೆಪಿಯ ಸಂಸ್ಕೃತಿ, ಯೋಚನೆಯನ್ನು ತೋರಿಸುತ್ತದೆ ಎಂದಿದ್ದರು.

ಇದಕ್ಕೆ ನಳಿನ್ ಕುಮಾರ್ ಕಟೀಲ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿ, ಸಿದ್ದರಾಮಯ್ಯನವರೆ ನಿಮ್ಮ ಖಾತೆ ಹ್ಯಾಕ್ ಆಗಿದೆ ಎಂದು ಭಾವಿಸುತ್ತೇನೆ, ಇದು ನಿಜವೆ ಆಗಿದ್ದಲ್ಲಿ ಪೊಲೀಸರಿಗೆ ದೂರು ನೀಡಿ, ಯಾಕೆಂದರೆ ಇದು ನಿಮ್ಮಂಥ ನಾಯಕರಿಗೆ ಶೋಭಿಸುವ ಭಾಷೆಯಲ್ಲ. ನಿಮ್ಮ ಖಾತೆ ಹ್ಯಾಕ್ ಆಗದೆ ಇದ್ದಲ್ಲಿ ನಿಮ್ಮ ಅಸಹನೆ ಮತ್ತು ಅದನ್ನು ವ್ಯಕ್ತಪಡಿಸಿದ ರೀತಿ ಬಗ್ಗೆ ನನಗೆ ಸಹಾನುಭೂತಿಯಿದೆ ಎಂದಿದ್ದಾರೆ.

ಇನ್ನು ಬಿಜೆಪಿ ತನ್ನ ಟ್ವಿಟ್ಟರ್ ಖಾತೆಯಲ್ಲಿ ಪ್ರತಿಕ್ರಿಯಿಸಿ ನೀವು ಬಳಸುತ್ತಿರುವ ಪದವೇ ಕಾಡು ಮನುಷ್ಯ ಎಂದು ಸಾಬೀತುಪಡಿಸುತ್ತದೆ, ಮತ್ತೊಂದು ಟ್ವೀಟ್​ನಲ್ಲಿ, "ಬಾದಾಮಿಯ ಶಾಸಕ ಸಿದ್ದರಾಮಯ್ಯ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು 2019 ರಲ್ಲಿ 2 ಲಕ್ಷಕ್ಕೂ ಅಧಿಕ ಮತಗಳಿಂದ ಗೆದ್ದರು. ಜನತೆ ನಿಮ್ಮ ಬೆನ್ನುಮೂಳೆ ಮುರಿದ ಇತಿಹಾಸ ನೆನಪಿಸಿಕೊಳ್ಳಿ, ಗೆದ್ದದ್ದು ಕೇವಲ 1,696 ಮತಗಳಿಂದ!. ಸ್ವಲ್ಪ ವ್ಯತ್ಯಾಸ ಆಗಿದ್ದರೂ ನೀವು ಕಾಡುಮನುಷ್ಯರಂತೆ ಜೀವನ ಮಾಡಬೇಕಿತ್ತು ಎಂದಿದೆ.

ಸಚಿವ ಸಿ ಟಿ ರವಿ ಕೂಡ ನಮ್ಮದ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಬಗ್ಗೆ ನೀವು ಬಳಸಿರುವ ಪದಗಳು ಬಳಕೆಗೆ ಯೋಗ್ಯವಾದುದಲ್ಲ. ಮಾಜಿ ಮುಖ್ಯಮಂತ್ರಿಯಾಗಿ ಅದು ನಿಮಗೆ ಶೋಭೆ ತರುವುದಿಲ್ಲ ಎಂದಿದ್ದಾರೆ.

SCROLL FOR NEXT