ಎಚ್.ಕುಸುಮಾ 
ರಾಜಕೀಯ

ನಿಮ್ಮ ಪ್ರೀತಿ ವಿಶ್ವಾಸವನ್ನು ಹಣ, ಅಧಿಕಾರದ ಆಸೆಗೆ ಮಾರಿಕೊಳ್ಳೋಲ್ಲ: ಎಚ್. ಕುಸುಮಾ

ನಾನು ನಿಮ್ಮ ಸೇವೆ ಮಾಡಲು ಬಯಸಿದ್ದು,ನಿಮ್ಮ ಪ್ರೀತಿ ವಿಶ್ವಾಸವನ್ನು ಎಂದಿಗೂ ಹಣ, ಅಧಿಕಾರದ ಆಸೆಗೆ ಮಾರಿಕೊಳ್ಳುವುದಿಲ್ಲ ಎಂದು ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹೆಚ್ ತಿಳಿಸಿದ್ದಾರೆ. 

ಬೆಂಗಳೂರು: ನಾನು ನಿಮ್ಮ ಸೇವೆ ಮಾಡಲು ಬಯಸಿದ್ದು,ನಿಮ್ಮ ಪ್ರೀತಿ ವಿಶ್ವಾಸವನ್ನು ಎಂದಿಗೂ ಹಣ, ಅಧಿಕಾರದ ಆಸೆಗೆ ಮಾರಿಕೊಳ್ಳುವುದಿಲ್ಲ ಎಂದು ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹೆಚ್ ತಿಳಿಸಿದ್ದಾರೆ. 

ರಾಜರಾಜೇಶ್ವರಿ ನಗರ ಉಪಚುನಾವಣೆ ಹಿನ್ನಲೆಯಲ್ಲಿ ಭಾನುವಾರ ಕ್ಷೇತ್ರದ ವಿವಿಧ ವಾರ್ಡ್ ಗಳಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಜತೆ ಪ್ರಚಾರ ನಡೆಸಿದ ಕುಸುಮಾ ಅವರು,ಕ್ಷೇತ್ರದ ಜನರಿಗೆ ಆಯುಧ ಪೂಜೆ ಹಾಗೂ ವಿಜಯ ದಶಮಿ ಹಬ್ಬದ ಶುಭಾಶಯಗಳು. ತಾಯಿ ಚಾಮುಂಡೇಶ್ವರಿ ಹಾಗೂ ರಾಜರಾಜೇಶ್ವರಿ ತಾಯಿ ಆಶೀರ್ವಾದಿಸಿ ಆಯುಷ್ಯ ಆರೋಗ್ಯ, ಐಶ್ವರ್ಯ ಕರುಣಿಸಲಿ  ಎಂದು ಪ್ರಾರ್ಥಿಸಿದರು.

ನನ್ನನ್ನು ನಿಮ್ಮ ಮನೆ ಮಗಳೆಂದು ಭಾವಿಸಿ ಇದೊಂದು ಬಾರಿ ಗೆಲ್ಲಿಸಿ ಕ್ಷೇತ್ರದ ಅಭಿವೃದ್ಧಿ ಹಾಗೂ ಜನ ಸೇವೆಗೆ ಅವಕಾಶ ಮಾಡಿಕೊಡಿ. ಈ ಆಂಜನೇಯ ದೇವರ ಮುಂದೆಯೇ ನಾನು ಪ್ರಮಾಣ ಮಾಡಿ ಹೇಳುತ್ತಿದ್ದೇನೆ. ನಾನು ಯಾವತ್ತೂ ಹಣ, ಅಧಿಕಾರದಾಸೆಗೆ ಜನರು ನೀಡಿದ ಆಶೀರ್ವಾದ, ಪ್ರೀತಿ, ವಿಶ್ವಾಸವನ್ನು ಮಾರಿಕೊಳ್ಳುವವಳಲ್ಲ. ಕಷ್ಟ, ಸುಖ ಯಾವುದೇ ಇರಲಿ ಸದಾ ಜನರೊಂದಿಗೆ ಇದ್ದು ಅವರ ಕಷ್ಟಸುಖಗಳಿಗೆ ಭಾಗಿಯಾಗುತ್ತೇನೆ ಎಂದು ಭರವಸೆ ನೀಡಿದರು.

ನಾನು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಮಾತ್ರವಲ್ಲ ನಿಮ್ಮ ಮನೆಮಗಳಾಗಿ ಮತ ಭಿಕ್ಷೆ ಕೇಳಲು ಬಂದಿದ್ದೇನೆ. ಒಂದೇ ಒಂದು ಅವಕಾಶ ಮಾಡಿ ಕೊಟ್ಟು ನೋಡಿ ಪ್ರಮಾಣಿಕವಾಗಿ ಕ್ಷೇತ್ರದ ಅಭಿವೃದ್ದಿಗೆ ಹಗಲಿರುಳು ಶ್ರಮಿಸುತ್ತೇನೆ. ಯುವಕರು, ಮಹಿಳೆಯರು, ಮಕ್ಕಳು, ವಯೋವೃದ್ಧರು ಎಲ್ಲರ ಏಳಿಗೆಗೆ ದುಡಿಯುತ್ತೇನೆ. ಜನರ ವಿಶ್ವಾಸಕ್ಕೆ ಎಂದಿಗೂ ಚ್ಯುತಿ ತರುವ ಕೆಲಸ ಮಾಡುವುದಿಲ್ಲ. ಬಿಜೆಪಿಯವರು ಬೆಂಕಿ ಹಚ್ಚುವ ಮಾತುಗಳನ್ನಾಡುತ್ತಿದ್ದಾರೆ. ನಾವು ಆ ಬೆಂಕಿ ಹಾರಿಸಿ ದೀಪ ಹಚ್ಚುವ ಕೆಲಸ ಮಾಡೋಣ. ನನ್ನನ್ನು ಗೆಲ್ಲಿಸುವುದರೊಂದಿಗೆ ನಮ್ಮ ಪಕ್ಷಕ್ಕೂ ಶಕ್ತಿ ತುಂಬಿ ಎಂದು ಮನವಿ ಮಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel