ನಟ ದರ್ಶನ್ 
ರಾಜಕೀಯ

ರಾಜರಾಜೇಶ್ವರಿ ನಗರ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಯಡಿಯೂರಪ್ಪ, ನಟ ದರ್ಶನ್ ಪ್ರಚಾರ ಇಂದು

ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಚುನಾವಣೆಯ ಪ್ರಚಾರ ಬಿರುಸಿನಿಂದ ಸಾಗಿದ್ದು, ಚಿತ್ರ ನಿರ್ಮಾಪಕ ಹಾಗೂ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ನಟ ದರ್ಶನ್ ಅವರು ಗುರುವಾರ ಪ್ರಚಾರ ನಡೆಸಲಿದ್ದಾರೆ. 

ಬೆಂಗಳೂರು: ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಚುನಾವಣೆಯ ಪ್ರಚಾರ ಬಿರುಸಿನಿಂದ ಸಾಗಿದ್ದು, ಚಿತ್ರ ನಿರ್ಮಾಪಕ ಹಾಗೂ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ನಟ ದರ್ಶನ್ ಅವರು ಗುರುವಾರ ಪ್ರಚಾರ ನಡೆಸಲಿದ್ದಾರೆ. 

ನಿನ್ನೆಯಷ್ಟೇ ನಟಿ ಖುಷ್ಬೂ ಸುಂದರ್ ಅವರು ಪ್ರಚಾರ ನಡೆಸಿದ್ದರು. ರೋಡ್ ಶೋ ಮೂಲಕ ಹಲವು ಪ್ರದೇಶಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ್ದರು. ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ರೋಡ್ ಶೋ ನಡೆಸಿ ಪ್ರಚಾರ ಮಾಡಲಿದ್ದಾರೆ. 

ಕುರುಕ್ಷೇತ್ರ ಸಿನಿಮಾದಲ್ಲಿ ನಟಿಸಿದ್ದ ದರ್ಶನ್​ ಅವರು ಮುನಿರತ್ನ ಜೊತೆಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ದರ್ಶನ್​ ಪ್ರಚಾರದಿಂದ ಆರ್​ಆರ್​ ನಗರ ಇಂದು ಮತ್ತಷ್ಟು ರಂಗೇರಲಿದೆ. ಈ ನಡುವೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೂಡ ಚುನಾವಣಾ ಅಖಾಡಕ್ಕೆ ಇಳಿಯಲಿದ್ದು, ನಾಳೆ ಶಿರಾದಲ್ಲಿ, ನಾಡಿದ್ದು ಆರ್ ಆರ್ ನಗರದಲ್ಲಿ ಪಕ್ಷದ ಪರವಾಗಿ ಪ್ರಚಾರ ನಡೆಸಲಿದ್ದಾರೆ.

ನಾಳೆ ಯಡಿಯೂರಪ್ಪ ಶಿರಾದ ಮದಲೂರು, ಶಿರಾ ಟೌನ್ನಲ್ಲಿ ಪ್ರಚಾರ ಮಾಡಲಿದ್ದು ಇದೇ 31ರಂದು ಆರ್ ಆರ್ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಪ್ರಚಾರ ಕೈಗೊಳ್ಳಲಿದ್ದಾರೆ.

ನವೆಂಬರ್ 3ರಂದು ಆರ್. ಆರ್. ನಗರ ಉಪ ಚುನಾವಣೆ ನಡೆಯಲಿದ್ದು, ಬಹಿರಂಗ ಪ್ರಚಾರ ಭಾನುವಾರ ಅಂತ್ಯವಾಗಲಿದೆ. ಆದ್ದರಿಂದ, ವಿವಿಧ ರಾಜಕೀಯ ಪಕ್ಷಗಳು ಪ್ರಚಾರವನ್ನು ಬಿರುಸಿನಿಂದ ನಡೆಸುತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

ಮಗು ಆಡಿಸುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ; ರಕ್ಷಣೆಗೆ ಧಾವಿಸಿದ ಮಹಿಳೆ, Video ವೈರಲ್

'ಭಾರತೀಯನ ಮದುವೆಯಾದಾಕ್ಷಣ Indian ಆಗಲ್ಲ, ಬಾಂಗ್ಲಾದೇಶಿ ಪತ್ನಿಗೆ ಭಾರತ ಪ್ರವೇಶ ನಿರಾಕರಣೆ ಸರಿ ಇದೆ': ಹೈಕೋರ್ಟ್

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!