ಸಿದ್ದರಾಮಯ್ಯ 
ರಾಜಕೀಯ

ಮುನಿರತ್ನ ಪರ ಕೆಲಸ ಮಾಡಿದರೆ ಮುಂದೆ ಕಷ್ಟದ ದಿನಗಳು ಕಾದಿವೆ- ಪೊಲೀಸರಿಗೆ ಸಿದ್ದರಾಮಯ್ಯ ಎಚ್ಚರಿಕೆ

ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ ಎಂದು ಮುನಿರತ್ನ ಪರ ಕೆಲಸ ಮಾಡಿದರೆ ಮುಂದೆ ನಿಮಗೆ ಕಷ್ಟದ ದಿನಗಳು ಕಾದಿವೆ ಎಂದು ಪೊಲೀಸರಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು: ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ ಎಂದು ಮುನಿರತ್ನ ಪರ ಕೆಲಸ ಮಾಡಿದರೆ ಮುಂದೆ ನಿಮಗೆ ಕಷ್ಟದ ದಿನಗಳು ಕಾದಿವೆ ಎಂದು ಪೊಲೀಸರಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

 ರಾಜರಾಜೇಶ್ವರಿ ವಿಧಾನಸಭೆ ಕ್ಷೇತ್ರದ ಜಾಲಹಳ್ಳಿ, ಪೀಣ್ಯ ಮತ್ತಿತರ ವಾರ್ಡ್ ನಲ್ಲಿ ಇಂದು ರೋಡ್‌ ಶೋ ನಡೆಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕುಸುಮಾ ಅವರ ಪರ ಮತ ಯಾಚನೆ ಮಾಡಿ ಮಾತನಾಡಿದ ಅವರು, ಪೊಲೀಸರು ಒಂದು ಪಕ್ಷದ ಪರ ಕೆಲಸ ಮಾಡಿದರೆ ಸಹಿಸುವುದಿಲ್ಲ ಎಂದರು. 

ತನ್ನ ವಿರೋಧಿಗಳನ್ನು ಹೆದರಿಸಿ, ಬೆದರಿಸಿ ತಾನು ಶಾಸಕನಾಗಬಹುದು ಅಂತ ಮುನಿರತ್ನ ಭಾವಿಸಿದ್ದರೆ, ಅವರಂಥ ಮೂರ್ಖ ಬೇರೊಬ್ಬರಿಲ್ಲ. ಪೊಲೀಸ್ ಇಲಾಖೆ ನಿಷ್ಪಕ್ಷಪಾತವಾಗಿರಬೇಕು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದೆ ಎಂಬ ಕಾರಣಕ್ಕೆ ಅವರ ಪರ ಕೆಲಸ ಮಾಡಿದರೆ ಭವಿಷ್ಯದಲ್ಲಿ ಕಷ್ಟದ ದಿನಗಳನ್ನು ಎದುರಿಸಬೇಕಾಗುತ್ತದೆ. ಮುನಿರತ್ನ ಅವರು ಎರಡು ಬಾರಿ ಗೆದ್ದು ಶಾಸಕನಾಗಲು ಕಾರಣ ಕಾಂಗ್ರೆಸ್ ಪಕ್ಷವೇ ಹೊರತು ಅವರ ವೈಯಕ್ತಿಕ ವರ್ಚಸ್ಸಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ