ಎಚ್ ಡಿ ಕುಮಾರಸ್ವಾಮಿ-ಸಿಟಿ ರವಿ 
ರಾಜಕೀಯ

ಅಧಿಕಾರದ ಅಮಲು ಕೆಲವರಿಗೆ ಮಾತ್ರ ತೆವಲು: ಸಿ.ಟಿ ರವಿ ಹೇಳಿಕೆಗೆ ಮಾಜಿ ಸಿಎಂ ಕುಮಾರಸ್ವಾಮಿ ತಿರುಗೇಟು

ಪ್ರವಾಸೋದ್ಯಮ ಸಚಿವ ಸಿ.ಟಿ. ರವಿಯವರು ಅಧಿಕಾರದ ಮದದ ಮತ್ತಿನಲ್ಲಿ ತೇಲುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಬೆಂಗಳೂರು: ಪ್ರವಾಸೋದ್ಯಮ ಸಚಿವ ಸಿ.ಟಿ. ರವಿಯವರು ಅಧಿಕಾರದ ಮದದ ಮತ್ತಿನಲ್ಲಿ ತೇಲುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಸಿಟಿ ರವಿ ಅವರು ಮೊದಲು ತುರ್ತಾಗಿ ಪರೀಕ್ಷೆಗೆ ಒಳಗಾಗುವುದು ಒಳಿತು. ನಾನು ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ ಸಮಚಿತ್ತದಲ್ಲಿ ಇರುತ್ತೇನೆ. ಅಧಿಕಾರದ ಅಮಲು ಕೆಲವರಿಗೆ ಮಾತ್ರ ತೆವಲು ಎಂದು ಸಚಿವ ಸಿ.ಟಿ ರವಿ ಅವರ ಹೇಳಿಕೆಗೆ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಸಚಿವ ಸಿ.ಟಿ ರವಿ ಅವರು ವಿಧಾನಸೌಧಲ್ಲಿಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಅವರ ಸರ್ಕಾರ ಪತನಕ್ಕೆ ಡ್ರಗ್ಸ್, ಬೆಟ್ಟಿಂಗ್ ದಂಧೆ ಹಣ ಬಳಕೆ ಆರೋಪಕ್ಕೆ ಪ್ರತಿಕ್ರಿಯಿಸುತ್ತಾ, ಮಾಜಿ ಮುಖ್ಯಮಂತ್ರಿ ಮತ್ತಿನಲ್ಲಿರಬೇಕು. ಅವರಿಗೆ ಪರೀಕ್ಷೆ ನಡೆಸುವ ಅಗತ್ಯತೆಯಿದೆ ಎಂದು ಹೇಳಿಕೆಗೆ ನೀಡಿದ್ದರು.

ಸಚಿವ ಸಿ.ಟಿ.ರವಿ ಹೇಳಿಕೆಗೆ ಟ್ವೀಟ್ ಮೂಲಕ ತಿರುಗೇಟು ನೀಡಿರುವ ಕುಮಾರಸ್ವಾಮಿ ಅವರು ಸಿ.ಟಿ ರವಿಗೆ ಅಧಿಕಾರದ ಅಮಲು ಮತ್ತು ತೆವಲು ಎಂದು ಸರಣಿ ಟ್ವೀಟ್ ಮೂಲಕ ಭರ್ಜರಿಯಾಗಿ ಸಚಿವ ಸುಧಾಕರ್ ಹಾಗೂ ಸಿ.ಟಿ ರವಿಗೆ ಬಿಸಿ ಮುಟ್ಟಿಸಿದ್ದಾರೆ.

ಪ್ರವಾಸೋದ್ಯಮ ಸಚಿವ ಸಿ.ಟಿ. ರವಿಯವರು ಅಧಿಕಾರದ ಮದದ ಮತ್ತಿನಲ್ಲಿ ತೇಲುತ್ತಿದ್ದಾರೆ. ಹೀಗಾಗಿ ಅವರು ಮೊದಲು ತುರ್ತಾಗಿ ಪರೀಕ್ಷೆಗೆ ಒಳಗಾಗುವುದು ಒಳಿತು. ನಾನು ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ ಸಮಚಿತ್ತದಲ್ಲಿ ಇರುತ್ತೇನೆ. ಅಧಿಕಾರದ ಅಮಲು ಕೆಲವರಿಗೆ ಮಾತ್ರ ತೆವಲು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!