ರಾಜಕೀಯ

ಆರ್'ಎಸ್ಎಸ್ ಶಿಬಿರಕ್ಕೆ ಪ್ರಣಬ್ ಭೇಟಿ ಸ್ಮರಿಸಿ ಬೇಸರ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ವಾಗ್ದಾಳಿ

Manjula VN

ಬೆಂಗಳೂರು: ಆರ್ಎಸ್ಎಸ್ ಶಿಬಿರಕ್ಕೆ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ಭೇಟಿ ನೀಡಿದ್ದನ್ನು ಸ್ಮರಿಸಿ ಕಾಂಗ್ರೆಸ್ ನಾಯಕರು ಬೇಸರ ವ್ಯಕ್ತಪಡಿಸಿರುವುದಕ್ಕೆ ಬಿಜೆಪಿ ಬುಧವಾರ ತೀವ್ರವಾಗಿ ಕಿಡಿಕಾರಿದೆ. 

ಕೆಪಿಸಿಸಿ ಕಚೇರಿಯಲ್ಲಿ ಪ್ರಣಬ್ ಮುಖರ್ಜಿಯವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ಮಾತನಾಡಿದ್ದ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಹಾಗೂ ಮಲ್ಲಿಕಾರ್ಜುನ ಖರ್ಗೆಯವರು, ಆರ್ಎಸ್ಎಸ್ ಶಿಬಿರಕ್ಕೆ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ಭೇಟಿ ನೀಡಿದ್ದನ್ನು ಸ್ಮರಿಸಿ ಬೇಸರ ವ್ಯಕ್ತಪಡಿಸಿದ್ದರು. 

ಇದಕ್ಕೆ ಪ್ರತಿಕ್ರಿಯೆ ನೀಡಿರುವ ರಾಜ್ಯ ಬಿಜೆಪಿ ವಕ್ತಾರ ಕ್ಯಾಪ್ಟೆನ್ ಗಣೇಶ್ ಕಾರ್ನಿಕ್ ಅವರು, ಮಾಜಿ ರಾಷ್ಟ್ರಪತಿಗಳ ನಿರ್ಧಾರಕ್ಕೆ ಕಾಂಗ್ರೆಸ್ ತಬ್ಬಿಬ್ಬಾಗಿತ್ತು. ಆರ್‌ಎಸ್‌ಎಸ್ ಕೇಂದ್ರ ಕಚೇರಿಗೆ ಭೇಟಿ ನೀಡುವ ಮೂಲಕ ಮುಖರ್ಜಿ ಅವರು “ಅಲ್ಪಸಂಖ್ಯಾತರ ಮನವೊಲಿಸುವ ರಾಜಕಾರಣ, ಹುಸಿ ಜಾತ್ಯತೀತತೆ, ಜಾತ್ಯತೀತತೆಯ ಹೆಸರಿನಲ್ಲಿ ದೇಶದ ಸಾಂಸ್ಕೃತಿಕ ಪರಂಪರೆ ನಾಶಪಡಿಸುತ್ತಿರುವುದಕ್ಕೆ ಬೇಸರಗೊಂಡಿರುವುದನ್ನು ಪರೋಕ್ಷವಾಗಿ ತಿಳಿಸಿದ್ದರು ಎಂದು ಹೇಳಿದ್ದಾರೆ. 

ಮಾಜಿ ರಾಷ್ಟ್ರಪತಿಗಳು ಆರ್‌ಎಸ್‌ಎಸ್ ರಾಷ್ಟ್ರೀಯತೆಯ ಸಿದ್ಧಾಂತವನ್ನು ಒಪ್ಪಿಕೊಂಡಿದ್ದರು. ಪ್ರತಿಯೊಬ್ಬ ವ್ಯಕ್ತಿಯಲ್ಲೂ ರಾಷ್ಟ್ರೀಯ ಪಾತ್ರವನ್ನು ಬೆಳೆಸುವ ಪ್ರಯತ್ನ ಮಾಡಿದ್ದರು. ಕಾಂಗ್ರೆಸ್ ನಾಯಕರೂ ಕೂಡ ರಾಷ್ಟ್ರೀಯ ಜೀವನದಲ್ಲಿ ಆರ್‌ಎಸ್‌ಎಸ್‌ನ ಮಹತ್ವವನ್ನು ಅರಿತುಕೊಳ್ಳಬೇಕಿದೆ ಎಂದು ತಿಳಿಸಿದ್ದಾರೆ. 

SCROLL FOR NEXT