ರಾಜಕೀಯ

ವಿಧಾನ ಸಭೆ ಅಧಿವೇಶನದ ಬಳಿಕ ಸಚಿವ ಸಂಪುಟ ವಿಸ್ತರಣೆ: ಸಚಿವ ಆರ್.ಅಶೋಕ್

Lingaraj Badiger

ಯಾದಗಿರಿ: ನಾಳೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ದೆಹಲಿಗೆ ತೆರಳಿದರೂ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪಕ್ಷದ ವರಿಷ್ಠರ ಬಳಿ ಚರ್ಚೆ ಮಾಡುವುದಿಲ್ಲ. ವಿಧಾನ ಸಭೆ ಅಧಿವೇಶನ ಮುಗಿದ ಮೇಲೆ ಸಂಪುಟ ವಿಸ್ತರಣೆ ಮಾಡಲಾಗುತ್ತೆ ಎಂದು ಸಚಿವ ಆರ್.ಅಶೋಕ್ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ದೆಹಲಿಗೆ ತೆರಳುತ್ತಿರುವುದು ಪೂರ್ವ ನಿಗದಿತ ಕಾರ್ಯಕ್ರಮ ಹಾಗೂ ಅತಿವೃಷ್ಟಿ ಪರಿಹಾರ ಪಡೆಯುವ ಬಗ್ಗೆ ಚೆರ್ಚಿಸಲು. ಈ ನಡುವೆ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಾಚನೆ ಬಗ್ಗೆ ಹೈಕಮಾಂಡ್ ಜೊತೆ ಚೆರ್ಚೆ ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನೆರೆ ಪರಿಹಾರಕ್ಕಾಗಿ ಸಿಎಂ ನಾಳೆ ದೆಹಲಿಗೆ ಹೋಗಲಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿ ಮಾಡಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಭೇಟಿಗೆ ಸಮಯ ಕೇಳಿದ್ದಾರೆ. ಸದ್ಯ ಎರಡನೇ ಕಂತಿನಲ್ಲಿ 395 ಕೋಟಿ ಕೊಟ್ಟಿದ್ದು ಹೆಚ್ಚಿನ ಪರಿಹಾರಕ್ಕೆ ಮನವಿ ಮಾಡಲಿದ್ದಾರೆ ಎಂದರು.

ಇದೇ ವೇಳೆ ಡ್ರಗ್ಸ್ ಜಾಲದಲ್ಲಿ ರಾಜಕಾರಣಿಗಳ ಮಕ್ಕಳ ನಂಟಿದೆಯೇ ಎನ್ನುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಡ್ರಗ್ಸ್ ಪ್ರಕರಣದಲ್ಲಿ ರಾಜಕಾರಣಿಗಳ ಮಕ್ಕಳು ಭಾಗಿಯಾಗಿರುವ ಬಗ್ಗೆ ಯಾವುದೇ ಮಾಹಿತಿಯಿಲ್ಲ. ಹಾಗೇನಾದರು ಮಾಹಿತಿ ಸಿಕ್ಕರೆ ಕ್ರಮ ಕೈಗೊಳ್ಳಲಾಗುತ್ತದೆ. ತಪ್ಪು ಯಾರೆ ಮಾಡಿದ್ದರು ಕ್ರಮಕೈಗೊಳ್ಳಲು ಕಾನೂನು ಇದೆ ಎಂದರು.

SCROLL FOR NEXT