ರಾಜಕೀಯ

ನಾಳೆ ಸಿಎಂ ಯಡಿಯೂರಪ್ಪ ದೆಹಲಿಗೆ ಪ್ರಯಾಣ, ಸಂಪುಟ ವಿಸ್ತರಣೆ ಕುರಿತು ಚರ್ಚೆ ಸಾಧ್ಯತೆ

Lingaraj Badiger

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಚರ್ಚೆ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನಾಳೆ (ಗುರುವಾರ) ದಿಢೀರ್ ದೆಹಲಿಗೆ ತೆರಳುತ್ತಿದ್ದಾರೆ.

ಯಡಿಯೂರಪ್ಪ ಅವರು ದೆಹಲಿಯಲ್ಲಿ ಪಕ್ಷದ ವರಿಷ್ಠರನ್ನು ಮುಖಾಮುಖಿ ಭೇಟಿಯಾಗಿ ಸಂಪುಟ ವಿಸ್ತರಣೆ ಸೇರಿದಂತೆ ಹಲವು ಮಹತ್ವದ ವಿಷಯಗಳ ಬಗ್ಗೆ ಚರ್ಚಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜ್ಯದ ಪ್ರವಾಹ ಪರಿಹಾರ ನಿರ್ವಹಣೆಗೆ ಸಿಎಂ ಕೇಂದ್ರದಿಂದ 8 ಸಾವಿರ ಕೋಟಿ ಅನುದಾನ ಕೋರಿದ್ದರು, ಆದರೆ ಕೇಂದ್ರ ಸರ್ಕಾರ ಅದರಲ್ಲಿ ಕೇವಲ ಶೇ.10 ರಷ್ಟು ಮಾತ್ರ ನೀಡಲಿದೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಸಿಎಂ ಹೆಚ್ಚಿನ ಅನುದಾನ ಕೋರುವುದರ ಜೊತೆಗೆ ಕಳೆದ ವರ್ಷದಿಂದ ಉಂಟಾದ ಪ್ರವಾಹ ಹಾನಿಯ ಸಂಬಂಧವು  ಚರ್ಚಿಸಲಿದ್ದಾರೆ ಎನ್ನಲಾಗಿದೆ.

ಸಿಎಂ ಯಡಿಯೂರಪ್ಪ ಅವರು ನಾಳೆ ಬೆಳಗ್ಗೆ ಕಲಬುರಗಿಗೆ ತೆರಳಲಿದ್ದು, ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಲಿರುವ ಅವರು ಅಂದು ಸಂಜೆ ಕೇಂದ್ರದ ಕೆಲವು ಸಚಿವರನ್ನು ಭೇಟಿಯಾಗಲಿದ್ದಾರೆ.

ಶುಕ್ರವಾರ ಬೆಳಗ್ಗೆ 9ಕ್ಕೆ ಕರ್ನಾಟಕ ಭವನ-1 (ಕಾವೇರಿ) ಪುನರ್‌ ನಿರ್ಮಾಣಕ್ಕೆ ಭೂಮಿ ಪೂಜೆ ಮಾಡಲಿದ್ದಾರೆ. ನಂತರ ಮತ್ತೆ ಕೇಂದ್ರ ಸಚಿವರನ್ನು ಭೇಟಿ ಮಾಡಲಿದ್ದಾರೆ. ಶನಿವಾರವೂ ಕೇಂದ್ರ ಸಚಿವರ ಭೇಟಿ ಕಾರ್ಯಕ್ರಮವಿದೆ. ಇದರ ಮಧ್ಯೆ ರಾಜ್ಯದ ಸಂಸದರೊಂದಿಗೆ ಸಭೆ ನಡೆಸಲು ಉದ್ದೇಶಿಸಿದ್ದಾರೆ. ಹಾಗೆಯೇ ಪ್ರಧಾನಿ ಮೋದಿ ಅವರ ಭೇಟಿಗೂ ಸಮಯ ಕೋರಿದ್ದಾರೆ. ಸೆ. 19ರಂದು ರಾತ್ರಿ ಸಿಎಂ ರಾಜ್ಯಕ್ಕೆ ವಾಪಸಾಗಲಿದ್ದಾರೆ.

SCROLL FOR NEXT