ಸಿದ್ದರಾಮಯ್ಯ 
ರಾಜಕೀಯ

ಬಿಜೆಪಿ ಸರ್ಕಾರ ಸಾಲ ಮಾಡಿ ರಾಜ್ಯವನ್ನು ದಿವಾಳಿ ಮಾಡುವುದು ನಿಶ್ಚಿತ - ಸಿದ್ದರಾಮಯ್ಯ

ಬಿಜೆಪಿ ಸರ್ಕಾರ ಸಾಲ ಮಾಡಿ ರಾಜ್ಯವನ್ನು ದಿವಾಳಿ ಮಾಡುವುದು ನಿಶ್ಚಿತ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರು ದೆಹಲಿಗೆ ಹೋಗಿ ನೆರೆಪರಿಹಾರ, ಜಿಎಸ್‌ಟಿ ಪರಿಹಾರ ಸೇರಿ ಹೆಚ್ಚಿನ‌ ಅನುದಾನ ಕೇಳಿ ತರುತ್ತಾರೆಂಬ ನಿರೀಕ್ಷೆಯಿತ್ತು, ಆದರೆ ಅನುದಾನ ನೀಡುವ ಬಗ್ಗೆ ಕೇಂದ್ರದ ಯಾವೊಬ್ಬ ಮಂತ್ರಿಯೂ ಈವರೆಗೆ ಮಾತನಾಡಿಲ್ಲ. ಹೀಗಾಗಿ ಬಿಜೆಪಿ ಸರ್ಕಾರ ಸಾಲ ಮಾಡಿ ರಾಜ್ಯವನ್ನು ದಿವಾಳಿ ಮಾಡುವುದು ನಿಶ್ಚಿತ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಮತ ನೀಡಿ ಗೆಲ್ಲಿಸಿದ ಮತದಾರರೇ ನೊಂದು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವನ್ನು ರಾಷ್ಟ್ರೀಯ ನಿರುದ್ಯೋಗ ದಿನವಾಗಿ ಆಚರಣೆ ಮಾಡಿದ್ದಾರೆ ಎಂದರೆ ರಾಷ್ಟ್ರದಲ್ಲಿ ಬಿಜೆಪಿ ಆಡಳಿತದ ಕೊನೆ ದಿನಗಳು ಸಮೀಪಿಸುತ್ತಿದೆ ಎಂದೇ ಅರ್ಥ. ಇಂಥಾ ಸಂದರ್ಭದಲ್ಲಿ ಗೌರವಯುತವಾಗಿ ಅವರೇ ರಾಜೀನಾಮೆ ನೀಡುವುದು ಉತ್ತಮ ಎಂದು ಅವರು ಸರಣಿ ಟ್ವೀಟ್ ನಲ್ಲಿ ಒತ್ತಾಯಿಸಿದ್ದಾರೆ.

ನಾವಾಗಿಯೇ ಯಾರನ್ನು ನಮ್ಮ ಪಕ್ಷಕ್ಕೆ ಬನ್ನಿ ಎಂದು ಕೈಹಿಡಿದು ಎಳೆದುಕೊಂಡು ಬರುವುದಿಲ್ಲ. ನಮ್ಮ ಪಕ್ಷದ ಸಿದ್ಧಾಂತಗಳನ್ನು, ಪಕ್ಷದ ನಾಯಕತ್ವವನ್ನು ಒಪ್ಪಿ ಬರುವವರಿಗೆ ಪಕ್ಷದ ಬಾಗಿಲು ಸದಾ ತೆರೆದಿರುತ್ತದೆ. ಸೈದ್ಧಾಂತಿಕ ಬದ್ಧತೆಯಿಲ್ಲದ ಅಧಿಕಾರದಾಹಿಗಳ ಅಗತ್ಯ ನಮ್ಮ ಪಕ್ಷಕ್ಕಿಲ್ಲ. ಅಂಥವರಿಂದ ಕಾಂಗ್ರೆಸ್ ದೂರವಿರಲಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ