ರಾಜಕೀಯ

ವಿಧಾನಸಭೆ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಬ್ರಹ್ಮಾಸ್ತ್ರ: ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ನಿರ್ಧಾರ

Shilpa D

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಶನಿವಾರ ಸಂಜೆ ಕಾಂಗ್ರೆಸ್ ಹಿರಿಯ ನಾಯಕರುಗಳ ಜೊತೆ ಸಭೆ ನಡೆಸಿದರು.

ಸೋಮವಾರದಿಂದ ಆರಂಭವಾಗುವ ವಿಧಾನಸಭೆ ಅಧಿವೇಶನದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯಲು ಕಾಂಗ್ರೆಸ್ ತಂತ್ರಗಾರಿಕೆ ರೂಪಿಸುತ್ತಿದೆ.

ಸದನದಲ್ಲಿ ಯಾವ ರೀತಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಬೇಕು ಎಂಬ ಬಗ್ಗೆ ಚರ್ಚಿಸಲಾಯಿತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ನೀಡಿರುವ ಅನುದಾನ, ಪ್ರವಾಹ ಪರಿಹಾರ ಕಾರ್ಯ, ಮತ್ತು ಕೊರೋನಾ ನಿರ್ವಹಣೆ ಸೇರಿದಂತೆ ಸರ್ಕಾರ ಜಾರಿಗೆ ತಂದಿರುವ ಎಲ್ಲಾ ಮಸೂದೆಗಳ ಬಗ್ಗೆ ಸಮಗ್ರವಾಗಿ ಚರ್ಚಿಸಲು ನಾವು ಬಯಸಿದ್ದೇವೆ ಎಂದು ಅಹ್ಮದ್ ತಿಳಿಸಿದ್ದಾರೆ.

ಒಂದು ವೇಳೆ ಸರ್ಕಾರ ಅಧಿವೇಶನದ ಅವಧಿಯನ್ನು ಮೊಟಕುಗೊಳಿಸಿದರೇ ಸರ್ಕಾರದ ವಿರುದ್ಧ ಪ್ರತಿಭಟಿಸಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ. 

ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್,ಪರಿಷತ್ ವಿರೋಧ ಪಕ್ಷದ ನಾಯಕ ಎಸ್ ಆರ್ ಪಾಟೀಲ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು.
 

SCROLL FOR NEXT