ರಾಜಕೀಯ

ಸಿದ್ಧರಾಮಯ್ಯ ಊಸರವಳ್ಳಿ ರಾಜಕಾರಣದ ನಿಜ ಬಣ್ಣ ಬಯಲು: ಎಚ್.ಡಿ.ಕುಮಾರಸ್ವಾಮಿ

Manjula VN

ಬೆಂಗಳೂರು: ಅಧಿಕಾರದ ಲಾಲಸೆಯಿಂದ ಕಾಂಗ್ರೆಸ್ ಗೆ ಜಿಗಿದ ಸಿದ್ದರಾಮಯ್ಯ ಅವರು 'ಜೆಡಿ ಎಸ್ ಅವಕಾಶವಾದಿ ಪಕ್ಷ' ಎನ್ನುವ ಮೂಲಕ ತಮ್ಮ ಊಸರವಳ್ಳಿ ರಾಜಕಾರಣದ ನಿಜಬಣ್ಣ ಬಯಲು ಮಾಡಿ ಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಪಕ್ಷ ನಾಯಕ ಸಿದ್ದರಾಮಯ್ಯನ ವಿರುದ್ಧ ಲೇವಡಿ ಮಾಡಿದ್ದಾರೆ.

ಜೆಡಿಎಸ್ ಪಕ್ಷ ಅವಕಾಶವಾದಿಗಳ ಪಕ್ಷ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಸಾಮಾಜಿಕ ಜಾಲತಾಣ ಟ್ವಿಟರ್ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. 

ಜೆಡಿಎಸ್ ಪಕ್ಷದಲ್ಲಿ ದ್ದಾಗ ಅಧಿಕಾರ, ಸ್ಥಾನ-ಮಾನಗಳನ್ನು ಅನುಭವಿಸಿ ತಮ್ಮ ಬೆಂಬಲಿಗರೊಂದಿಗೆ ಗಂಟು ಮೂಟೆ ಕಟ್ಟಿಕೊಂಡು ಅಧಿಕಾರದ ಆಸೆಗಾಗಿ, ಅವಕಾಶವಾದಿ ಹಾದಿ ಹಿಡಿದ ಕೃತಘ್ನಗೇಡಿತನದ ಸಿದ್ದರಾಮಯ್ಯ ಅವರಿಂದ ನಮ್ಮ ಪಕ್ಷ ಸ್ವಾಭಿಮಾನದ ಪಾಠ ಕಲಿಯಬೇಕಿಲ್ಲ. ನಿಮ್ಮ ಸ್ವಾಭಿಮಾನದ ಪ್ರಲಾಪ ಮಠದೊಳಗಿನ‌ ಬೆಕ್ಕಿನ ಮುಖವಾಡದಂತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

SCROLL FOR NEXT