ರಾಜಕೀಯ

ಯಡಿಯೂರಪ್ಪ ನಾಯಕತ್ವ ಬದಲಾವಣೆ ಮಾಧ್ಯಮಗಳ ಕಟ್ಟುಕತೆ: ರಮೇಶ್ ಜಾರಕಿಹೊಳಿ

Shilpa D

ಬೆಂಗಳೂರು: ಮುಖ್ಯಮಂತ್ರಿ ಬಿ,ಎಸ್ ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆಗೆ ಬಿಜೆಪಿಯಲ್ಲಿ ಪಿತೂರಿ ನಡೆಯುತ್ತಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಇದೆಲ್ಲಾ ಮಾಧ್ಯಮಗಳ ಸೃಷ್ಠಿ ಎಂದು ಹರಿಹಾಯ್ದಿದ್ದಾರೆ.

ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿದ ರಮೇಶ್ ಜಾರಕಿಹೊಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. ನಾಯಕತ್ವ ಬದಲಾವಣೆ ಎಂಬುದು ಕೇವಲ ಮಾಧ್ಯಮಗಳ ಕಟ್ಟುಕತೆಯಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ತಮ್ಮ ಜೊತೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಶಾಸಕರಿಗೆ ಸಚಿವ ಸ್ಥಾನ ನೀಡುವಂತೆ ವರಿಷ್ಟರ ಬಳಿ ಒತ್ತಡ ಹೇರಲು ಇತ್ತೀಚೆಗೆ ಸುಮಾರು 3 ಬಾರಿ ದೆಹಲಿ ಜಾರಕಿಹೊಳಿ ಭೇಟಿ ನೀಡಿದ್ದರು. 

ಎಂಎಲ್ ಸಿ ಗಳಾದ ಸಿಪಿ ಯೋಗೇಶ್ವರ್, ಶಂಕರ್ ಮತ್ತು ಎಎಚ್ ವಿಶ್ವನಾಥ್ ಅವರಿಗೆ ಸಂಪುಟದಲ್ಲಿ ಸ್ಥಾನ ನೀಡುವಂತೆ ಜಾರಕಿಹೊಳಿ ಒತ್ತಡ ಹಾಕುತ್ತಿದ್ದು, 8 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಉಮೇಶ್ ಕತ್ತಿ ಅವರಿಗೆ ಸಚಿವ ಸ್ಥಾನ ನೀಡಿದರೇ ತಮಗೆ ಸಂತೋಷವಾಗುತ್ತದೆ ಎಂದು ಹೇಳಿದ್ದಾರೆ. ಉಪ ಚುನಾವಣೆಯಲ್ಲಿ ಗೆಲವು ಸಾಧಿಸಿರುವ ಎಲ್ಲಾ ಶಾಸಕರುಗಳಿಗೆ ಸಚಿವ ಸ್ಥಾನ ನೀಡಬೇಕು ಎಂದು ಅವರು ಹೇಳಿದ್ದಾರೆ.

ತಮ್ಮ ತಂಡದ ಮೂವರು ಶಾಸಕರಿಗೆ ಸಚಿವ ಸ್ಥಾನ ನೀಡಬೇಕೆಂಬ ಜಾರಕಿಹೊಳಿ ಬೇಡಿಕೆಗೆ ದೆಹಲಿ ನಾಕರು ಬೆಂಬಲ ಸೂಚಿಸಿದ್ದಾರೆ ಎನ್ನಲಾಗಿದೆ, ಯೋಗೇಶ್ವರ್ ಅವರನ್ನು ಡಿಸಿಎಂ ಮಾಡಬೇಕು ಎಂಬ ಬೇಡಿಕ ಕೂಡ ಜಾರಕಿ ಹೊಳಿ ಇಟ್ಟಿದ್ದಾರೆ ಎನ್ನಲಾಗಿದೆ.

SCROLL FOR NEXT